ಎಸ್‌ಡಿಎಂ ತಾಂತ್ರಿಕ ವಿದ್ಯಾಲಯದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮವನ್ನು ಪ್ರಾಂಶುಪಾಲ ಡಾ.ಸಂದೀಪ್ ಆರ್. ಉದ್ಘಾಟಿಸಿದರು. ಗ್ರಂಥಪಾಲಕಿ ಡಾ.ರಜತಾ ಪಿ.ಶೆಟ್ಟಿ ಮೊದಲಾದವರಿದ್ದರು. 
ಉಡುಪಿ

ನಿರಂತರವಾಗಿರಲಿ ಓದುವ ಸಂಸ್ಕೃತಿ

ಬೆಳ್ತಂಗಡಿ: ಇಂದಿನ ಡಿಜಿಟಲ್ ಯುಗದಲ್ಲಿ ಅಂಗೈಯಲ್ಲೇ ಎಲ್ಲ ಮಾಹಿತಿ ಸಿಗುತ್ತಿದ್ದರೂ ಪುಸ್ತಕಗಳ ಓದು ಮತ್ತು ಗ್ರಂಥಾಲಯಗಳ ಮಹತ್ವ ಕಡಿಮೆಯಾಗಿಲ್ಲ. ವಿದ್ಯಾರ್ಥಿಗಳು ಪಠ್ಯಪುಸ್ತಕಗಳಿಗೆ ಸೀಮಿತವಾಗದೆ ವಿವಿಧ ಸಾಹಿತ್ಯ, ವಿಜ್ಞಾನ, ತಂತ್ರಜ್ಞಾನ, ವ್ಯಕ್ತಿತ್ವ ವಿಕಸನ ಹಾಗೂ ಸಮಕಾಲೀನ ವಿಷಯಗಳಿಗೆ ಸಂಬಂಧಿಸಿದ ಪುಸ್ತಕ ಓದುವ ಮೂಲಕ ತಮ್ಮ ಜ್ಞಾನ ವಿಸ್ತರಿಸಿಕೊಳ್ಳಬೇಕು ಎಂದು ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯ ಪ್ರಾಂಶುಪಾಲ ಡಾ.ಸಂದೀಪ್ ಆರ್. ಹೇಳಿದರು.

ಉಜಿರೆಯ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಕಲಿಕಾ ಸಂಪನ್ಮೂಲ ಕೇಂದ್ರದ ವತಿಯಿಂದ ರಾಷ್ಟ್ರೀಯ ಗ್ರಂಥಪಾಲಕರ ದಿನ ಉದ್ಘಾಟಿಸಿ ಮಾತನಾಡಿದರು.
ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ರೀಡಥಾನ್ ಕಾರ್ಯಕ್ರಮ ಆಯೋಜಿಸಲಾಯಿತು. ವಿದ್ಯಾರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ವಿವಿಧ ಪುಸ್ತಕಗಳನ್ನು ಆಯ್ಕೆ ಮಾಡಿಕೊಂಡು ಓದಿದರು. ಓದಿದ ಪುಸ್ತಕಗಳ ಕುರಿತು ಅನಿಸಿಕೆಗಳನ್ನು ಹಂಚಿಕೊಂಡರು.
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವಿವಿಧ ಅಂಗ ಸಂಸ್ಥೆಗಳ ಗ್ರಂಥಪಾಲಕರು, ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಎಸ್‌ಡಿಎಂಐಟಿ ಗ್ರಂಥಪಾಲಕಿ ಡಾ.ರಜತಾ ಪಿ.ಶೆಟ್ಟಿ ಸ್ವಾಗತಿಸಿದರು.