ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಗುಬ್ಬಿ ಶಾಸಕ ಗುಬ್ಬಿ ಶ್ರೀನಿವಾಸ್, ನವಲಗುಂದ ಶಾಸಕ ಎನ್.ಎಚ್.ಕೋನ ರೆಡ್ಡಿ ಭೇಟಿ ನೀಡಿದರು. 
ಉಡುಪಿ

ಕಾಪು ಹೊಸ ಮಾರಿಗುಡಿಗೆ ಶಾಸಕರ ಭೇಟಿ

ಪಡುಬಿದ್ರಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕರ್ನಾಟಕ ವಿಧಾನಮಂಡಲ ಅಧೀನ ಶಾಸನ ರಚನಾ ಸಮಿತಿಯ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಗುಬ್ಬಿ ಶಾಸಕ ಗುಬ್ಬಿ ಶ್ರೀನಿವಾಸ್, ನವಲಗುಂದ ಶಾಸಕ ಎನ್.ಎಚ್.ಕೋನ ರೆಡ್ಡಿ ಗುರುವಾರ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿ ದರ್ಶನ ಪಡೆದರು.
ದೇಗುಲದ ಪ್ರಧಾನ ಅರ್ಚಕ ಶ್ರೀನಿವಾಸದ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ದೇಗುಲ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ.ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ ಸಾಲ್ಯಾನ್, ವಾಧವ ಆರ್.ಪಾಲನ್, ಹುಬ್ಬಳ್ಳಿ ಧಾರವಾಡ ಸಮಿತಿ ಪ್ರಧಾನ ಸಂಚಾಲಕ ಸುಗ್ಗಿ ಸುಧಾಕರ್ ಶೆಟ್ಟಿ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಮತ್ತಿತರರಿದ್ದರು.
-------ಪೋಟೋ---------
ಪಿಡಿಬಿ-ಜುಲ್-23-5-ಎಂಎಲ್‌ಎ
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಗುಬ್ಬಿ ಶಾಸಕ ಗುಬ್ಬಿ ಶ್ರೀನಿವಾಸ್, ನವಲಗುಂದ ಶಾಸಕ ಎನ್.ಎಚ್.ಕೋನ ರೆಡ್ಡಿ ಭೇಟಿ ನೀಡಿದರು.