ಉಡುಪಿಯ ಶೀಂಬ್ರ ಸಿದ್ಧಿವಿನಾಯಕ ದೇಗುಲ ಸಂಪರ್ಕದ ಕಾಂಕ್ರೀಟ್ ರಸ್ತೆಯನ್ನು ಯಶ್ಪಾಲ್ ಸುವರ್ಣ ಉದ್ಘಾಟಿಸಿದರು. ಪ್ರಭಾಕರ್ ಪೂಜಾರಿ, ಅಜಿತ್ ಪೈ, ರಮೇಶ್ ರಾವ್, ಬಾಲಾಜಿ ರಾಘವೇಂದ್ರ ಆಚಾರ್ಯ, ಚಂದ್ರಕಾಂತ್ ಕೆ.ಎನ್., ನಾಗರಾಜ್ ತಂತ್ರಿ, ಹರಿಕೃಷ್ಣ ಶಿವತ್ತಾಯ, ಮಧುಕರ್ ಮುದ್ರಾಡಿ ಇತರರಿದ್ದರು.
* ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅನಿಸಿಕೆ
* ಶೀಂಬ್ರದಲ್ಲಿ ಕಾಂಕ್ರೀಟ್ ರೋಡ್ ಉದ್ಘಾಟನೆ
ಉಡುಪಿ: ಶೀಂಬ್ರದಲ್ಲಿರುವ ಇತಿಹಾಸ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನವು ಉಡುಪಿಯ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿದೆ. ಕೃಷ್ಣಂಗಾರಕ ಚತುರ್ದಶಿಯಂದು ದೇಶದ ವಿವಿಧ ಭಾಗಗಳಿಂದ ಇಲ್ಲಿನ ಸ್ವರ್ಣ ನದಿಯಲ್ಲಿ ತೀರ್ಥ ಸ್ನಾನಕ್ಕೆಂದು ಸಹಸ್ರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಈ ಪುಣ್ಯ ಕ್ಷೇತ್ರಕ್ಕೆ ಉತ್ತಮ ಸಂಪರ್ಕ ಒದಗಿಸಲು 75 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದ್ದು, ದೇಗುಲಕ್ಕೆ ಬರುವ ಭಕ್ತರಿಗೆ ಅನುಕೂಲವಾಗಲಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಉಡುಪಿಯ ಮೂಡುಪೆರಂಪಳ್ಳಿ ವಾರ್ಡ್ನಲ್ಲಿ ಶೀಂಬ್ರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸಲು ಅಭಿವೃದ್ಧಿ ಪಡಿಸಿದ ಕಾಂಕ್ರೀಟ್ ರಸ್ತೆ ಉದ್ಘಾಟಿಸಿ ಮಾತನಾಡಿದರು.
ಉಡುಪಿ ನಗರಸಭಾ ಮಾಜಿ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಗಣ್ಯರಾದ ಅಜಿತ್ ಪೈ, ರಮೇಶ್ ರಾವ್, ಬಾಲಾಜಿ ರಾಘವೇಂದ್ರ ಆಚಾರ್ಯ, ಯುವ ಬ್ರಾಹ್ಮಣ ಪರಿಷತ್ನ ಚಂದ್ರಕಾಂತ್ ಕೆ.ಎನ್., ನಾಗರಾಜ್ ತಂತ್ರಿ, ಹರಿಕೃಷ್ಣ ಶಿವತ್ತಾಯ, ಪ್ರಶಾಂತ್ ಭಟ್ ಪೆರಂಪಳ್ಳಿ, ಅನಿತಾ ಬೆಲಿಂಡ ಡಿಸೋಜ, ಮಂಜುನಾಥ್ ಮಣಿಪಾಲ, ಡೆನಿಸ್ ಮಸ್ಕರೇನ್ಹಸ್, ಸುಮಾ, ವಿಜಯಾ ಪೂಜಾರಿ, ಗಣಪತಿ ಭಟ್, ವಾದಿರಾಜ ಆಚಾರ್ಯ, ಬಿಜೆಪಿ ಜಿಲ್ಲಾ ವಕ್ತಾರ ಮಧುಕರ್ ಮುದ್ರಾಡಿ, ಶಶಾಂಕ್ ಶಿವತ್ತಾಯ, ಗೋಪಾಲ್ ಆಚಾರ್ ಇನ್ನಿತರರು ಇದ್ದರು.