ಉಡುಪಿಯ ನಿಡಂಬಳ್ಳಿಯಲ್ಲಿ ನಿರ್ಮಾಣಗೊಂಡ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಯಶ್ಪಾಲ್ ಸುವರ್ಣ ಉದ್ಘಾಟಿಸಿದರು. ಎಂ.ಎ. ಗಫೂರ್, ಡಾ. ವಾಸುದೇವ, ಡಾ. ಅಕ್ಷತಾ, ಗುರು ಪ್ರಸಾದ್, ನಾಗರಾಜ್ ಕುಂದರ್, ಉಮೇಶ್ ಪೂಜಾರಿ, ಪ್ರಭಾಕರ್ ಪೂಜಾರಿ, ಪ್ರೇಮಲತಾ ಇತರರಿದ್ದರು.
* ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಶ್ಲಾಘನೆ
* ಆಯುಷ್ಮಾನ್ ಆರೋಗ್ಯ ಕೇಂದ್ರ ಉದ್ಘಾಟನೆ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಜನತೆಯ ಆರೋಗ್ಯ ಸೇವೆಗೆ ವಿಶೇಷ ಆದ್ಯತೆ ನೀಡಿದೆ. ಅದಕ್ಕೆ ನಿಡಂಬಳ್ಳಿಯಲ್ಲಿ ಉದ್ಘಾಟನೆಗೊಂಡ ಆಯುಷ್ಮಾನ್ ಆರೋಗ್ಯ ಕೇಂದ್ರವೂ ನಿದರ್ಶನವಾಗಿದೆ. ಇಲ್ಲಿನ ಜನತೆಗೆ ಉತ್ತಮ ಸೇವೆ ಲಭಿಸಲಿ. ಜತೆಗೆ ಆರೋಗ್ಯವಂತ ಸಮಾಜದ ಕುರಿತು ಜಾಗೃತಿ ಮೂಡಿಸುವ ಕಾರ್ಯವಾಗಲಿ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಉಡುಪಿಯ ಕಲ್ಯಾಣಪುರ ಗ್ರಾಪಂ ವ್ಯಾಪ್ತಿಯ ನಿಡಂಬಳ್ಳಿಯಲ್ಲಿ 65 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಶನಿವಾರ (ಜೂ.6) ಉದ್ಘಾಟಿಸಿ ಮಾತನಾಡಿದರು.
ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಆರೋಗ್ಯಕ್ಕೆ ಸಂಬಂಧಿಸಿ ಸರ್ಕಾರದ ಯೋಜನೆ ಹಾಗೂ ಸೇವೆಗಳು ಈ ಆಯುಷ್ಮಾನ್ ಆರೋಗ್ಯ ಕೇಂದ್ರದ ಮೂಲಕ ಸಾರ್ವಜನಿಕರಿಗೆ ಸಿಗುವಂತಾಗಲಿ ಎಂದು ಆಶಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ, ವೈದ್ಯರಾದ ಡಾ. ಅಕ್ಷತಾ, ಇಲಾಖೆಯ ಇಂಜಿನಿಯರ್ ಗುರು ಪ್ರಸಾದ್, ಕಲ್ಯಾಣಪುರ ಗ್ರಾಪಂ ಮಾಜಿ ಅಧ್ಯಕ್ಷರಾದ ನಾಗರಾಜ್ ಕುಂದರ್, ಸತೀಶ್ ನಾಯ್ಕ್, ಕೃಷ್ಣ ದೇವಾಡಿಗ, ಬಡಾನಿಡಿಯೂರು ಗ್ರಾಪಂ ಮಾಜಿ ಅಧ್ಯಕ್ಷರಾದ ಉಮೇಶ್ ಪೂಜಾರಿ, ಪ್ರಭಾಕರ್ ತಿಂಗಳಾಯ, ಉಡುಪಿ ನಗರಸಭಾ ಮಾಜಿ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಗ್ರಾಪಂ ಮಾಜಿ ಸದಸ್ಯರಾದ ಪ್ರೇಮಲತಾ, ನವೀನ್ ಕಾಂಚನ್, ಜಾನ್ಸನ್, ಪ್ರಶಾಂತ್ ಆಚಾರ್ಯ, ಅನಿತಾ ನಾಯ್ಕ್, ಪ್ರಮುಖರಾದ ಸುಧೀರ್ ಕಲ್ಯಾಣಪುರ, ಆಶಾ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.