ಮೊಬೈಲ್ ಫೋನ್ಗಳನ್ನು ಉಡುಪಿ ಜಿಲ್ಲಾ ಮೊಬೈಲ್ ರಿಟೈರ್ಲಸ್ ಅಸೋಸಿಯೇಶನ್ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರಿಗೆ ಹಸ್ತಾಂತರಿಸಿದ್ದಾರೆ.
ಉಡುಪಿ: ಜಿಲ್ಲೆಯ ಮೊಬೈಲ್ ಅಂಗಡಿಗಳಿಗೆ ಅಪರಿಚಿತ ವ್ಯಕ್ತಿಗಳು ಅನುಮಾನಾಸ್ಪದ ರೀತಿಯಲ್ಲಿ ಮಾರಾಟ ಮಾಡಲು ತಂದಿದ್ದ, ಲಕ್ಷಾಂತರ ರೂ. ಮೌಲ್ಯದ 7 ಮೊಬೈಲ್ ಫೋನ್ಗಳನ್ನು ಉಡುಪಿ ಜಿಲ್ಲಾ ಮೊಬೈಲ್ ರಿಟೈರ್ಲಸ್ ಅಸೋಸಿಯೇಶನ್ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರಿಗೆ ಹಸ್ತಾಂತರಿಸಿದ್ದಾರೆ.
ಮೊಬೈಲ್ ಅಂಗಡಿಗಳಿಗೆ ಬಂದಿದ್ದ ಅಪರಿಚಿತರು ಮೊಬೈಲ್ ಮಾರಾಟ ಮಾಡಲು ಯತ್ನಿಸಿದಾಗ, ಅಂಗಡಿ ಮಾಲೀಕರು ತಕ್ಷಣ ಕಾರ್ಯಪ್ರವೃತ್ತರಾಗಿದ್ದು, ಕೇಂದ್ರ ಸರ್ಕಾರದ 'ಸಂಚಾರ್ ಸಾಥಿ' ಆಪ್ ಮೂಲಕ ಮೊಬೈಲ್ಗಳ ಐಎಂಇಐ ಸಂಖ್ಯೆಯನ್ನು ಪರಿಶೀಲಿಸಿದಾಗ, ಆ ಎಲ್ಲಾ ಫೋನ್ಗಳು ಬ್ಲಾಕ್ ಲಿಸ್ಟ್ನಲ್ಲಿರುವುದು ಪತ್ತೆಯಾಗಿದೆ. ಫೋನ್ಗಳ ಸೂಕ್ತ ದಾಖಲೆಗಳನ್ನು ಕೇಳಿದಾಗ ಅಪರಿಚಿತರು ಯಾವುದೇ ದಾಖಲೆ ನೀಡದೆ ಪರಾರಿಯಾಗಿದ್ದಾರೆ. ಹೀಗೆ ಸಂಗ್ರಹಿಸಿ ಮೊಬೈಲ್ಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಈ ಮೊಬೈಲ್ಗಳ ಮೂಲ ವಾರಸುದಾರರನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆಹಚ್ಚಿ, ಅವರಿಗೆ ತಲುಪಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಅಸೋಸಿಯೇಶನ್ ಅಧ್ಯಕ್ಷ ವಿವೇಕ್ ಜಿ. ಸುವರ್ಣ, ಸದಸ್ಯರಾದ ರಂಜಿತ್ ಶೆಟ್ಟಿ, ಸಂದೇಶ್, ಸುಧರ್ಶನ್, ಗಣೇಶ್ ಮತ್ತು ಅಭಿಷೇಕ್ ಎಸ್ಪಿಯವರನ್ನು ಭೇಟಿಯಾಗಿ ಏಳು ಮೊಬೈಲ್ ಫೋನ್ಗಳನ್ನು ಕಾನೂನು ಪ್ರಕ್ರಿಯೆಗಾಗಿ ಒಪ್ಪಿಸಿದ್ದಾರೆ.