ಉಡುಪಿ: ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಶ್ರಯದಲ್ಲಿ 3 ದಿನಗಳ ಕಾಲ ನಡೆದಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜ್ ಅಥ್ಲೆಟಿಕ್ ಕ್ರೀಡಾಕೂಟದ ಸಮಾರೋಪ ಸಮಾರಂಭ ಗುರುವಾರ (ನ.13) ನಡೆಯಿತು.
ಕ್ರೀಡಾಕೂಟದಲ್ಲಿ ಸಮಗ್ರ ಚಾಂಪಿಯನ್ ಆದ ಆಳ್ವಾಸ್ ಕಾಲೇಜ್ ಮೂಡಬಿದರೆ ಹಾಗೂ ರನ್ನರ್ ಅಪ್ ಆದ ಉಜಿರೆಯ ಎಸ್ಡಿಎಂ ಕಾಲೇಜ್, 3ನೇ ಸ್ಥಾನ ಗಳಿಸಿದ ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಹಾಗೂ 4ನೇ ಸ್ಥಾನ ಗಳಿಸಿದ ಆತಿಥೇಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ತಂಡಗಳಿಗೆ ಪ್ರಶಸ್ತಿ ವಿತರಿಸಲಾಯಿತು.
ಕಾಲೇಜ್ನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾ ಹಾಗೂ ಯುವ ಸಬಲೀಕರಣ ಇಲಾಖೆಯ ಉಪನಿರ್ದೇಶಕ ಓಂಪ್ರಕಾಶ, ದೈಹಿಕ ಶಿಕ್ಷಣ ಭೋದಕರ ಸಂಘದ ಅಧ್ಯಕ್ಷ ಎವರೆಸ್ಟ್ ರೊಡ್ರಿಗಸ್, ಕ್ರೀಡಾಕೂಟದ ವೀಕ್ಷಕರಾದ ಡಾ. ಹರಿದಾಸ ಕೂಳೂರು, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕಿ ಡಾ. ಶ್ರೀದೇವಿ ಕೆ. ಉಪಸ್ಥಿತರಿದ್ದರು.
ಜಿಲ್ಲಾ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.
ರೋಶನ್ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರವೀಣಕುಮಾರ ಕಾರ್ಯಕ್ರಮ ನಿರೂಪಿಸಿದರು.