ಮೂಡುಬಿದಿರೆ ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸಮಾಜಮಂದಿರದಲ್ಲಿ ನಡೆಯಿತು. ಶ್ರೀನಿವಾಸ್ ನಾಯಕ್ ಇಂದಾಜೆ, ನೂತನ ಅಧ್ಯಕ್ಷ ನವೀನ್ ಸಾಲ್ಯಾನ್ ಮೊದಲಾದವರಿದ್ದರು. 
ಉಡುಪಿ

ಮೂಡುಬಿದಿರೆ ಪತ್ರಕರ್ತರ ಸಂಘದ ಪದಗ್ರಹಣ

ಮೂಡುಬಿದಿರೆ: ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಗುರುವಾರ ಜರುಗಿತು.
ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಜಿಲ್ಲಾ ಸಂಘ ಮಾಜಿ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಕಾರ್ಯಕ್ರಮ ಉದ್ಘಾಟಿಸಿದರು.
ನೂತನ ಅಧ್ಯಕ್ಷ ನವೀನ್ ಸಾಲ್ಯಾನ್ ಸಂಘದ ಮುಂದಿನ ಯೋಜನೆ ಕುರಿತು ಮಾಹಿತಿ ನೀಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಪುಷ್ಪರಾಜ್ ಬಿ.ಎನ್.ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.
ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ ಅಧ್ಯಕ್ಷ ರೋನ್ಸ್ ಬಂಟ್ವಾಳ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಮೂಡುಬಿದಿರೆ ಪ್ರೆಸ್ ಕ್ಲಬ್‌ನ ಸೀತಾರಾಮ್ ಆಚಾರ್ಯ, ಸಂಘದ ಪ್ರಧಾನ ಕಾರ್ಯದರ್ಶಿ ಜೈಸನ್ ತಾಕೋಡೆ, ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು ಉಪಸ್ಥಿತರಿದ್ದರು. ಪ್ರಸನ್ನ ಹೆಗ್ಡೆ ನಿರೂಪಿಸಿದರು.