ಉಡುಪಿಯ ಅಂಬಲಪಾಡಿಯಲ್ಲಿ ಮೇಲ್ಸೇತುವೆ ಕಾಮಗಾರಿನ್ನು ಕೋಟ ಶ್ರೀನಿವಾಸ ಪೂಜಾರಿ ಪರಿಶೀಲಿಸಿದರು. ಇಂಜಿನಿಯರ್ ನವೀನ್ ಇತರರಿದ್ದರು.
* ಉಡುಪಿ ಸಂಸದ ಕೋಟ ಪೂಜಾರಿ ಭರವಸೆ
* ಅಂಬಲಪಾಡಿಯಲ್ಲಿ ಮೇಲ್ಸೇತುವೆ ವೀಕ್ಷಣೆ
ಉಡುಪಿ: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಒಂದೂವರೆ ವರ್ಷದಿಂದ ನಡೆಯುತ್ತಿದ್ದು, ಅಂತಿಮ ಹಂತ ತಲುಪುತ್ತಿದೆ. ಮೇ ಅಂತ್ಯಕ್ಕೆ ಪ್ರಥಮ ಹಂತದ ಕಾಮಗಾರಿ ಮುಗಿಸಲು ಪ್ರಯತ್ನ ನಡೆದಿದೆ. ಆದರೆ, ತಾಂತ್ರಿಕ ಕಾರಣದಿಂದ ಜೂನ್ ಮೊದಲ ವಾರದಲ್ಲಿ ಸೇತುವೆಯ ಒಂದು ಭಾಗ ಉದ್ಘಾಟಿಸಿ, ವಾಹನ ಸಂಚಾರಕ್ಕೆ ಅನುವು ಮಾಡಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳೊಂದಿಗೆ ಅಂಬಲಪಾಡಿಗೆ ಭೇಟಿ ನೀಡಿ ಮೇಲ್ಸೇತುವೆ ಕಾಮಗಾರಿಯ ಪ್ರಗತಿ ವೀಕ್ಷಿಸಿ ಮಾತನಾಡಿದರು.
ಅಂಬಲಪಾಡಿಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿದೆ. ಈ ಸಮಸ್ಯೆಯಿಂದ ಅಪಘಾತಗಳು ಸಂಭವಿಸುತ್ತಿದ್ದು, ಸಂಚಾರಸಿಕ್ಕು ಸಮಸ್ಯೆ ನಿರಂತರವಾಗಿದೆ. ಹೀಗಾಗಿ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತವಾದರೆ ವಾಹನ ದಟ್ಟಣೆಯ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದರು.
ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಇಂಜಿನಿಯರ್ ನವೀನ್ ಹಾಗೂ ಇತರರು ಇದ್ದರು.