ಉಡುಪಿಯ ವೈಕುಂಠ ಬಾಳಿಗಾ ಲಾ ಕಾಲೇಜಿನ ಎನ್ಎಸ್ಎಸ್ ಶಿಬಿರದಲ್ಲಿ ರಾಜೇಂದ್ರ ಕಿಣಿ ಮಾತನಾಡಿದರು. ಡಾ. ಸುರೇಖಾ ಕೆ., ಮಂಜುನಾಥ್ ಪಟಗಾರ, ಜಯರಾಮ ಶೆಟ್ಟಿ, ಡಾ. ಜಯಮೋಲ್ ಪಿ.ಎಸ್., ಅಮೋಘ್ ಗಾಡ್ಕರ್ ಇದ್ದರು.
* ವಿದ್ಯಾರ್ಥಿಗಳಿಗೆ ರಾಜೇಂದ್ರ ಕಿಣಿ ಸಲಹೆ
* ಎನ್ಎಸ್ಎಸ್ ಶಿಬಿರ ಉದ್ಘಾಟನೆ
ಉಡುಪಿ: ಎನ್ಎಸ್ಎಸ್ನಲ್ಲಿ ತೊಡಗಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು, ಸೇವಾ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಯಲು ಸಾಧ್ಯವಾಗುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸಮಾಜ ಸೇವೆಯಲ್ಲೂ ತೊಡಗಿಸಿಕೊಳ್ಳಬೇಕು ಎಂದು ಉದ್ಯಮಿ, ಬೆಳ್ವೆಯ ರಾಧಿಕಾ ಕ್ಯಾಶ್ಯೂಸ್ ಸಂಸ್ಥೆಯ ರಾಜೇಂದ್ರ ಕಿಣಿ ಸಲಹೆ ನೀಡಿದರು.
ಉಡುಪಿಯ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್)ಯ ಘಟಕ 1 ಮತ್ತು 2ರ ವತಿಯಿಂದ ಬ್ರಹ್ಮಾವರ ತಾಲೂಕಿನ ಗೋಳಿಯಂಗಡಿ ಸ.ಪ.ಪೂ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದಲ್ಲಿ ವಾರಗಳ ಕಾಲ ನಡೆಯಲಿರುವ 2025-26ನೇ ಸಾಲಿನ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಗೋಳಿಯಂಗಡಿ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಪಟಗಾರ ಹಾಗೂ ಜಯರಾಮ ಶೆಟ್ಟಿ ಮಾತನಾಡಿ, ಎನ್ಎಸ್ಎಸ್ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದೆ. ಸೇವೆಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಇಂತಹ ಶಿಬಿರ ನೆರವಾಗುತ್ತವೆ ಎಂದರು.
ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ. ಸುರೇಖಾ ಕೆ. ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲೆ ಡಾ. ಪ್ರೀತಿ ಹರೀಶ್ ರಾಜ್, ಐಕ್ಯುಎಸಿ ಸಂಯೋಜನಾಧಿಕಾರಿ ಡಾ. ಜಯಮೋಲ್ ಪಿ.ಎಸ್., ಎನ್ಎಸ್ಎಸ್ ಸಂಯೋಜನಾಧಿಕಾರಿ ಅಮೋಘ್ ಗಾಡ್ಕರ್, ಎನ್ಎಸ್ಎಸ್ ಘಟಕದ ಕಾರ್ಯದರ್ಶಿ ಸಂದೇಶ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಎನ್ಎಸ್ಎಸ್ ಕಾರ್ಯದರ್ಶಿ ಸಮೀರ್ ಸ್ವಾಗತಿಸಿದರು. ಎನ್ಎಸ್ಎಸ್ ಅಧಿಕಾರಿ ಡಾ. ನವೀನ್ಚಂದ್ರ ಸಿ.ಬಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂಕಿತ ವಂದಿಸಿದರು. ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.
ಎನ್ಎಸ್ಎಸ್ ಶಿಬಿರದಲ್ಲಿ ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನ, ಗಿಡ ನೆಡುವ ಕಾರ್ಯಕ್ರಮ, ಆರೋಗ್ಯ ಹಾಗೂ ಪರಿಸರ ಸಂರಕ್ಷಣೆಯ ಜಾಗೃತಿ, ಬೀದಿ ನಾಟಕ ಪ್ರದರ್ಶಿಸಲಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗ್ರಾಮೀಣ ಬದುಕಿನ ಅರಿವು ಪಡೆದು, ಸಮಸ್ಯೆ ತಿಳಿದು ಅವುಗಳಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕು.
— ಡಾ. ಸುರೇಖಾ ಕೆ. ಬಾಳಿಗಾ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ.