ಆಚಾರಿಪಲ್ಕೆ ಶಾಲೆಯ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದಲ್ಲಿ ಡಾ.ಶೇಷಪ್ಪ ಮಾತನಾಡಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ನವೀನ್‌ಚಂದ್ರ ಶೆಟ್ಟಿ, ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕರಣೇಂದ್ರ ಪೂಜಾರಿ ಮೊದಲಾದವರಿದ್ದರು. 
ಉಡುಪಿ

ಸಂಸ್ಕಾರಯುತ ಬದುಕು ಕಲಿಸುವ ಎನ್ನೆಸ್ಸೆಸ್

ಇಂದಿರಾ ಎನ್ ಕೆ
ಬಂಟ್ವಾಳ: ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಬದುಕಿನ ಕ್ರಮ ಕಲಿಸಿ ಅವರ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗಲಿದೆ ಎಂದು ಮಂಗಳೂರು ವಿವಿಯ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಶೇಷಪ್ಪ ಹೇಳಿದರು.
ಸರ್ಕಾರಿ ಪ್ರಥಮದರ್ಜೆ ಕಾಲೇಜು ವಾಮದಪದವು ವತಿಯಿಂದ ಪಂಜಿಕಲ್ಲು ಗ್ರಾಮದ ಆಚಾರಿಪಲ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾತನಾಡಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ನವೀನ್‌ಚಂದ್ರ ಶೆಟ್ಟಿ, ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕರಣೇಂದ್ರ ಪೂಜಾರಿ, ಗ್ರಾ.ಪಂ. ಮಾಜಿ ಸದಸ್ಯ ಕೇಶವ ಪೂಜಾರಿ, ಶಾಲೆಯ ಮುಖ್ಯಶಿಕ್ಷಕ ಮರ್ಸಿನ್ ಮೇಥಿ ಪಾಯಸ್ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಕೆ.ಬಿ. ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸಮಿತಿಯ ಸಂಚಾಲಕ ಪ್ರೊ.ಶ್ರೀಧರ್ ಕೆ., ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಅಮ್ಮುರೈ ಹರ್ಕಾಡಿ, ಆಚಾರಿಪಲ್ಕೆ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ದಯಾನಂದ ಗೌಡ, ಪಂಜಿಕಲ್ಲು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಗೌಡ, ಉದ್ಯಮಿಗಳಾದ ಗಂಗಾಧರ ಪೂಜಾರಿ ಅಮಯ್ಯಗುತ್ತು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಪ್ರವೀಣ್ ಗಟ್ಟಿ, ಪ್ರಾಧ್ಯಾಪಕ ಸುನೀಲ್, ಸಹ ಶಿಬಿರಾಧಿಕಾರಿಗಳಾದ ಡಾ.ಉದಯ್ ಕುಮಾರ್ ಹಾಗೂ ದಿನೇಶ್ ಉಪಸ್ಥಿತರಿದ್ದರು.
ಶಿಬಿರಾಧಿಕಾರಿಗಳಾದ ಡಾ.ಪುಟ್ಟಲಕ್ಷ್ಮಮ್ಮ ಸ್ವಾಗತಿಸಿ, ಡಾ.ವಿಶಾಲ್ ಪಿಂಟೋ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಬಿರಾಧಿಕಾರಿ ಡಾ.ಮಧು ಎ.ಎಸ್. ವಂದಿಸಿದರು.