ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ 
ಉಡುಪಿ

ಮಾ. 7ರಂದು ಜಿಲ್ಲಾ ಪತ್ರಕರ್ತರ ಸಂಘ, ಘಟಕ ಪದಾಧಿಕಾರಿಗಳ ಪದಗ್ರಹಣ

* ರಾಜ್ಯಾಧ್ಯಕ್ಷ ತಗಡೂರು ಉದ್ಘಾಟನೆ

* ಸಾಧಕ ವರದಿಗಾರರಿಗೆ ಸನ್ಮಾನ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪತ್ರಿಕಾ ಭವನದ ವತಿಯಿಂದ ಕಾರ್ಕಳ, ಕುಂದಾಪುರ, ಬೈಂದೂರು, ಕಾಪು, ಬ್ರಹ್ಮಾವರ, ಹೆಬ್ರಿ ತಾಲೂಕು ಘಟಕಗಳ 2025-28ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಯೋಜಿಸಲಾಗಿದೆ.
ಮಾ.7ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ಬ್ರಹ್ಮಗಿರಿಯಲ್ಲಿರುವ ಐಎಂಎ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಸಂಘದ ನೂತನ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘದ ಉಸ್ತುವಾರಿ, ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್​ ಕುಟ್ಟಪ್ಪ, ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್​, ಸಂಘದ ನಿಕಟಪೂರ್ವ ಅಧ್ಯಕ್ಷ ರಾಜೇಶ್​ ಶೆಟ್ಟಿ ಅಲೆವೂರು, ರಾಜ್ಯ ಸಮಿತಿ ಸದಸ್ಯ ಆಸ್ಟ್ರೊ ಮೋಹನ್​, ರಾಷ್ಟ್ರೀಯ ಸಮಿತಿ ಸದಸ್ಯ ಅರುಣಕುಮಾರ್​ ಶಿರೂರು ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಸಾಧಕ ಪತ್ರಕರ್ತರು ಹಾಗೂ ಜಿಲ್ಲಾ ಚುನಾವಣಾಧಿಕಾರಿಯನ್ನು ಸನ್ಮಾನಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್​ ಪೊಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.