ರಾಜ್ಯದಲ್ಲಿ ವಿದ್ಯುತ್ ವಿತರಣಾ ವಲಯವನ್ನು ಖಾಸಗೀಕರಣಗೊಳಿಸುವ ಸರ್ಕಾರದ ಪ್ರಸ್ತಾವನೆಯನ್ನು ವಿರೋಧಿಸಿ ಕುಂಬ್ರ ವರ್ತಕರ ಸಂಘದ ಪದಾಧಿಕಾರಿಗಳು ಆಕ್ಷೇಪಣಾ ಪತ್ರ ಸಲ್ಲಿಸಿದರು. ಪಿ.ಕೆ.ಮಹಮ್ಮದ್ ಕೂಡುರಸ್ತೆ, ಶ್ಯಾಮ್‌ಸುಂದರ ರೈ ಕೊಪ್ಪಳ ಮೊದಲಾದವರಿದ್ದರು.  
ಉಡುಪಿ

ವಿದ್ಯುತ್ ಖಾಸಗೀಕರಣ ಪ್ರಸ್ತಾವನೆಗೆ ಆಕ್ಷೇಪಣೆ ಸಲ್ಲಿಕೆ

ಇಂದಿರಾ ಎನ್ ಕೆ
ಪುತ್ತೂರು ಗ್ರಾಮಾಂತರ: ರಾಜ್ಯದ ವಿದ್ಯುತ್ ವಿತರಣಾ ವಲಯವನ್ನು ಖಾಸಗೀಕರಣಗೊಳಿಸುವ ಸರ್ಕಾರದ ಪ್ರಸ್ತಾವನೆಯನ್ನು ವಿರೋಧಿಸಿ ಕುಂಬ್ರ ವರ್ತಕರ ಸಂಘದ ಪದಾಧಿಕಾರಿಗಳು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಿದ್ದಾರೆ.
ಮೆಸ್ಕಾಂನ ಪುತ್ತೂರು ಗ್ರಾಮಾಂತರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಿವಶಂಕರ್ ಮೂಲಕ ಆಯೋಗಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಿದರು.
ಖಾಸಗೀಕರಣಗೊಳಿಸುವ ನಿರ್ಧಾರವು ವಿದ್ಯುತ್ ದರ ಏರಿಕೆಗೆ ಕಾರಣವಾಗುವ ಸಾಧ್ಯತೆ ಇದೆ. ಈಗಾಗಲೇ ಬೆಲೆ ಏರಿಕೆಯಿಂದಾಗಿ ಸಂಕಷ್ಟದಲ್ಲಿರುವ ಸಣ್ಣ ಮತ್ತು ಮಧ್ಯಮ ವರ್ಗದ ಜನತೆಗೆ ಹಾಗೂ ವ್ಯಾಪಾರಿಗಳಿಗೆ ಹೊರೆಯಾಗಲಿದ್ದು, ಸರ್ಕಾರದ ಈ ಪ್ರಸ್ತಾವನೆಯನ್ನು ತೀವ್ರವಾಗಿ ವಿರೋಧಿಸುವುದಾಗಿ ಪತ್ರದಲ್ಲಿ ತಿಳಿಸಲಾಗಿದೆ. ತಮ್ಮ ಆಕ್ಷೇಪಣೆಯನ್ನು ಕೂಡಲೇ ಪರಿಗಣಿಸಬೇಕು. ಸರ್ಕಾರ ಕೂಡಲೇ ವಿದ್ಯುತ್ ಖಾಸಗೀಕರಣ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಲಾಗಿದೆ.
ಕುಂಬ್ರ ವರ್ತಕ ಸಂಘದ ಅಧ್ಯಕ್ಷ ಪಿ.ಕೆ.ಮಹಮ್ಮದ್ ಕೂಡುರಸ್ತೆ, ಸ್ಥಾಪಕಾಧ್ಯಕ್ಷ ಶ್ಯಾಮ್‌ಸುಂದರ ರೈ ಕೊಪ್ಪಳ, ಸಂಘದ ಮಾಜಿ ಅಧ್ಯಕ್ಷರಾದ ನಾರಾಯಣ ಪೂಜಾರಿ ಕುರಿಕ್ಕಾರ, ದಿವಾಕರ ಶೆಟ್ಟಿ, ಕೋಶಾಧಿಕಾರಿ ರಮೇಶ್ ಆಳ್ವ ಕಲ್ಲಡ್ಕ, ಪದಾಧಿಕಾರಿಗಳಾದ ಉದಯ ಆಚಾರ್ಯ ಕೃಷ್ಣನಗರ, ಕೇದಾರ್ ಆರ್. ಮೊದಲಾದವರು ನಿಯೋಗದಲ್ಲಿದ್ದರು.