ಉಡುಪಿಯ ಕೊಚ್ಚಿನ್ ಶಿಪ್ಯಾರ್ಡ್ನ ಸಭಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ಭಾಷೆ ಕಲಿಕಾ ತರಬೇತಿ ಶಿಬಿರವನ್ನು ಸೀತಾರಾಮ ಶೆಟ್ಟಿ ಉದ್ಘಾಟಿಸಿದರು. ಹರಿಕುಮಾರ್ ಎ., ಡಾ.ಗಣನಾಥ ಶೆಟ್ಟಿ ಎಕ್ಕಾರು, ಪೂರ್ಣಿಮಾ, ಎಂ.ಅಂಬಲವನನ್, ಡಾ.ನಿಕೇತನಾ, ದೀಪಿಕಾ ಇದ್ದರು.
* ಡಾ.ಗಣನಾಥ ಶೆಟ್ಟಿ ಎಕ್ಕಾರು ಮಾಹಿತಿ
* ಮೂರು ತಿಂಗಳ ತರಬೇತಿ ಶಿಬಿರ ಉದ್ಘಾಟನೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕನ್ನಡೇತರ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಉದ್ಯೋಗ ಹಾಗೂ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರಿಗೆ ಕನ್ನಡ ಭಾಷೆಯ ಕಲಿಕೆಗಾಗಿ ಮೂರು ತಿಂಗಲ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ. ಕನ್ನಡ ಭಾಷೆ ಕಲಿಯಲು ಆಸ್ತಕರಿಗೆ ಇದೊಂದು ಉತ್ತಮ ಅವಕಾಶವಾಗಿದೆ ಎಂದು ಡಾ. ಶಿವರಾಮ ಕಾರಂತ ಟ್ರಸ್ಟ್ನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಅಭಿಪ್ರಾಯಪಟ್ಟರು.
ಉಡುಪಿಯ ಕೊಚ್ಚಿನ್ ಶಿಪ್ಯಾರ್ಡ್ ಲಿ.ನ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಸಹಕಾರದಲ್ಲಿ ಆಯೋಜಿಸಿದ್ದ ಮೂರು ತಿಂಗಳ 'ಕನ್ನಡೇತರಿಗೆ ಕನ್ನಡ ಕಲಿಕಾ ತರಬೇತಿ ಶಿಬಿರ' ಕಾರ್ಯಕ್ರಮದಲ್ಲಿ ಮಾತನಾಡಿದರು.
ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು.
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ನ ಸಿಇಒ ಹರಿಕುಮಾರ್ ಎ., ಮುಖ್ಯ ಹಣಕಾಸು ಅಧಿಕಾರಿ ಶಂಕರ್ ನಟರಾಜ್, ಉಪಪ್ರಧಾನ ವ್ಯವಸ್ಥಾಪಕ ಎಂ.ಅಂಬಲವನನ್, ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ನಿಕೇತನಾ, ಶಿಕ್ಷಕಿ ದೀಪಿಕಾ ಉಪಸ್ಥಿತರಿದ್ದರು.
ಡಾ.ಶಿವರಾಮ ಕಾರಂತ ಟ್ರಸ್ಟ್ನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರೇಣುಕಾ ಕಾರ್ಯಕ್ರಮ ನಿರ್ವಹಿಸಿದರು.