ಪಡುಬಿದ್ರಿ: ಸಂಘ ಶಕ್ತಿ ನೀಡುತ್ತದೆ. ಸನ್ಮಾರ್ಗದ ಹಾದಿಯಲ್ಲಿ ಮುನ್ನಡೆಯಲು ಪ್ರೇರಣೆ ನೀಡುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆಯ ಕರಾವಳಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಕಾಪುವಿನಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕುಮಟ್ಟದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ ವಾತನಾಡಿದರು.
ಶಿರ್ವ ಮಹಿಳಾ ಮಂಡಳಿ ಗೌರವಾಧ್ಯಕ್ಷೆ ಬಬಿತಾ ಜಗದೀಶ್ ಅರಸ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ಕಲ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಾರದಾ ಆರ್.ಶೇಟ್ ‘ಮಹಿಳೆ ಸುಂದರ ಬದುಕನ್ನು ರೂಪಿಸಿಕೊಳ್ಳುವಲ್ಲಿ ನೈತಿಕ ಮೌಲ್ಯಗಳ ಅವಶ್ಯಕತೆ’ ವಿಷಯದ ಕುರಿತು ವಿಚಾರ ಮಂಡಿಸಿದರು.
ಕಾಪು ಸೊಸೈಟಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ, ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸತ್ಯೇಂದ್ರ ಪೈ, ಜಿ.ಪಂ. ವಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಅಶೋಕ ಶೆಟ್ಟಿಗಾರ್, ಗ್ರಾವಾಭಿವೃದ್ಧಿ ಯೋಜನೆ ಕೇಂದ್ರ ಸಮಿತಿ ತಾಲೂಕು ಅಧ್ಯಕ್ಷ ರಾವೇಂದ್ರ ಶೆಟ್ಟಿ ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆಯ ಕಾಪು ಯೋಜನಾಧಿಕಾರಿ ಮಮತಾ ಶೆಟ್ಟಿ ಸ್ವಾಗತಿಸಿದರು. ಮೇಲ್ವಿಚಾರಕಿ ಸವಿತಾ ವರದಿ ಮಂಡಿಸಿದರು. ವಿನುತಾ ವಂದಿಸಿದರು. ಆಶಾ ಆಚಾರ್ಯ ನಿರೂಪಿಸಿದರು.