ಕಾಪು ಶ್ರೀ ಹಳೇ ವಾರಿಯಮ್ಮ ದೇವಸ್ಥಾನದಲ್ಲಿ ಸಹಸ್ರ ಚಂಡಿಕಾ ಯಾಗ ಮಹೋತ್ಸವದ ವರ್ಧಂತಿ ಉತ್ಸವ ಅಂಗವಾಗಿ ಪಂಚ ದುರ್ಗಾ ಹವನ ನಡೆಯಿತು
ಪಡುಬಿದ್ರಿ: ಕಾಪು ಪೇಟೆ ಗೌಡ ಸಾರಸ್ವತ ಸಮಾಜದ ಆಡಳಿತಕ್ಕೆ ಒಳಪಟ್ಟಿರುವ ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಸಹಸ್ರ ಚಂಡಿಕಾಯಾಗ ವರ್ಧಂತಿ ಮಹೋತ್ಸವ ಅಂಗವಾಗಿ ಮಂಗಳವಾರ ಪಂಚ ದುರ್ಗಾ ಹವನ, ಪೂರ್ಣಾಹುತಿ ಮತ್ತು ಅನ್ನಸಂತರ್ಪಣೆ ನೆರವೇರಿತು.
ಪ್ರಧಾನ ಅರ್ಚಕ ಕಮಲಾಕ್ಷ ಭಟ್ ನೇತೃತ್ವದಲ್ಲಿ ಪಂಚ ದುರ್ಗಾ ಹವನ ಪೂರ್ಣಾಹುತಿಯ ಧಾರ್ಮಿಕ ವಿಧಿ ವಿಧಾನಗಳು ಸಂಪನ್ನಗೊಂಡವು. ಸಂಜೆ ದೀಪಾರಾಧನೆ, ದುರ್ಗಾ ನಮಸ್ಕಾರ, ಸಾಮೂಹಿಕ ನಮಸ್ಕಾರ ಮತ್ತು ದರ್ಶನ ಸೇವೆ ನಡೆಯಿತು.
ಕಾಪು ಹಳೇ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಪ್ರಸಾದ್ ಗೋಕುಲ್‌ದಾಸ್ ಶೆಣೈ, ಮೊಕ್ತೇಸರರಾದ ಸದಾಶಿವ ರಾಧಾಕೃಷ್ಣ ಕಾಮತ್, ರಾಜೇಶ್ ಮಾಧವರಾಯ ಶೆಣೈ, ರಾಮ ಶಶಿಧರ ನಾಯಕ್, ಶ್ರೀಕಾಂತ ಲಕ್ಷ್ಮೀನಾರಾಯಣ ಭಟ್, ಆಡಳಿತ ಮಂಡಳಿ ಸದಸ್ಯರಾದ ಚಂದ್ರಕಾಂತ್ ಕಾಮತ್, ಕೃಷ್ಣಾನಂದ ನಾಯಕ್, ರಾಜೇಶ್ ಶೆಣೈ ಮಜೂರು, ಮಾಜಿ ಆಡಳಿತ ಮೊಕ್ತೇಸರ ಶ್ರೀಧರ ಆನಂದರಾಯ ಶೆಣೈ, ವಾಜಿ ಮೊಕ್ತೇಸರ ರಮೇಶ್ ಪೈ ಹಾಗೂ ವಿವಿಧ ಗಣ್ಯರು, ಕಾಪು ಪೇಟೆಯ ಹತ್ತು ಸಮಸ್ತರು ಮತ್ತು ಭಕ್ತರು ಉಪಸ್ಥಿತರಿದ್ದರು.