ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಸದ್ಭಾವನಾ 2025ರ ಆಮಂತ್ರಣ ಪತ್ರಿಕೆಯನ್ನು ಕುಂದಾಪುರ ವಿಧಾನಸಭಾ ಶಾಸಕ ಕಿರಣ್ ಕುಮಾರ್ ಕೊಡ್ಗಿ ಬಿಡುಗಡೆಗೊಳಿಸಿದರು.
ಕೋಟ: ಪಂಚವರ್ಣ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ವ್ಯವಸ್ಥೆಗೆ ಕೈಗನ್ನಡಿಯಾಗಿದೆ. ಸಮಾಜದೊಂದಿಗೆ ಸಮಾಜಮುಖಿ ಕಾರ್ಯ ನಡೆಸುವ ಪಂಚವರ್ಣದ ಕಾರ್ಯವೈಕರಿಗೆ ಪ್ರಶಂಸನೀಯ ಎಂದು ಕುಂದಾಪುರ ವಿಧಾನಸಭಾ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ನ.16ರಂದು ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಸದ್ಭಾವನಾ 2025ರ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಸಾಲಿಗ್ರಾಮ ಶ್ರೀಗುರುನರಸಿಂಹ ದೇಗುಲದ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್, ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ.ಜಗದೀಶ ನಾವಡ, ಪಂಚವರ್ಣದ ಗೌರವ ಸಲಹೆಗಾರರಾದ ಭಾರತಿ ವಿ.ಮಯ್ಯ, ಗೌರವಾಧ್ಯಕ್ಷ ಸತೀಶ್ ಎಚ್.ಕುಂದರ್, ಮಾಜಿ ತಾ.ಪಂ ಸದಸ್ಯೆ ಲಲಿತಾ ಪೂಜಾರಿ, ಕೋಟ ಪಂಚಾಯಿತಿ ಮಾಜಿ ಸದಸ್ಯ ರವೀಂದ್ರ ಜೋಗಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಮಾಜಿ ಅಧ್ಯಕ್ಷರಾದ ಅಜಿತ್ ಆಚಾರ್, ನಾಗರಾಜ್ ಗಾಣಿಗ, ಗಿರೀಶ್ ಆಚಾರ್, ಸಂಚಾಲಕ ಅಮೃತ್ ಜೋಗಿ, ಉಪಾಧ್ಯಕ್ಷರಾದ ಸಂತೋಷ್ ಪೂಜಾರಿ, ದಿನೇಶ್ ಆಚಾರ್ ಉಪಸ್ಥಿತರಿದ್ದರು. ಸುಜಾತ ಬಾಯರಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.