ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವದಲ್ಲಿ ಪ್ರಾಂಶುಪಾಲ ಸಂದೀಪ್ ಗಾಣಿಗ, ಉಪಪ್ರಾಂಶುಪಾಲ ಸುಜಯ್ ಕೋಟೆಗಾರ್, ಪ್ರೌಢಶಾಲೆ ಮುಖ್ಯಶಿಕ್ಷಕ ಕೃಷ್ಣ ಅಡಿಗ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ರೇಷ್ಮಾ ಡಿಸೋಜ ಉಪಸ್ಥಿತರಿದ್ದರು
ಕುಂದಾಪುರ: ಹೆತ್ತವರು ತಮ್ಮ ಮಕ್ಕಳಿಗೆ ಸಮಯನ್ನು ಮೀಸಲಿಟ್ಟು ಅವರೊಂದಿಗೆ ಕಾಲ ಕಳೆಯಬೇಕು. ಮಗುವಿನ ಸರ್ವತೋಮುಖ ಬೆಳವಣಿಗೆಗಾಗಿ ಶ್ರಮಿಸಬೇಕು ಎಂದು ಸಾಹಿತಿ ಡಾ.ಪಾರ್ವತಿ ಜಿ.ಐತಾಳ್ ಹೇಳಿದರು.
ಸೋಮವಾರ ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಶ್ರೀ ವೆಂಕಟರಮಣ ದೇವಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಆಡಳಿತ ಮಂಡಳಿ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂದೀಪ್ ಗಾಣಿಗ, ಉಪಪ್ರಾಂಶುಪಾಲ ಸುಜಯ್ ಕೋಟೆಗಾರ್, ಪ್ರೌಢಶಾಲೆ ಮುಖ್ಯಶಿಕ್ಷಕ ಕೃಷ್ಣ ಅಡಿಗ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ರೇಷ್ಮಾ ಡಿಸೋಜ ಉಪಸ್ಥಿತರಿದ್ದರು.
ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಪ್ರಮೀಳಾ ಡಿಸೋಜ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಅಮೂಲ್ಯಾ ನಾಯಕ್, ಯುವಿಕಾ ಬಂಗೇರ ಸ್ವಾಗತಿಸಿದರು. ಅಕ್ಷರಾ ಅತಿಥಿಗಳನ್ನು ಪರಿಚಯಿಸಿದರು. ಅಹನಾ ಜೆ.ಆಚಾರ್ಯ ಹಾಗೂ ರಿಷಭ್ ಆರ್.ನಾಯ್ಕ ನಿರೂಪಿಸಿದರು. ಆರಾಧ್ಯಾ ನಾರಾಯಣ ವಂದಿಸಿದರು.
ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವದಲ್ಲಿ ಪ್ರಾಂಶುಪಾಲ ಸಂದೀಪ್ ಗಾಣಿಗ, ಉಪಪ್ರಾಂಶುಪಾಲ ಸುಜಯ್ ಕೋಟೆಗಾರ್, ಪ್ರೌಢಶಾಲೆ ಮುಖ್ಯಶಿಕ್ಷಕ ಕೃಷ್ಣ ಅಡಿಗ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ರೇಷ್ಮಾ ಡಿಸೋಜ ಉಪಸ್ಥಿತರಿದ್ದರು.