ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಸ್ವಾತಂತ್ರೊೃೀತ್ಸವದಲ್ಲಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ರವಿಶಂಕರ್ ರಾವ್ ಅವರನ್ನು ಗೌರವಿಸಲಾಯಿತು. ಪ್ರಮುಖರಾದ ಎಚ್.ನಾಗರಾಜ್ ಶೆಟ್ಟಿ, ಸಪ್ನಾ ಎನ್.ಶೆಟ್ಟಿ, ಪ್ರಶಾಂತ್, ಭಗವತಿ, ದೀಪಕ್ ಎನ್. ಉಪಸ್ಥಿತರಿದ್ದರು.
ಹೆಬ್ರಿ: ಹಿಂದಿನ ಕಾಲದಲ್ಲಿ ಮನೆಯಲ್ಲಿ ಅನೇಕ ಮಂದಿ ಹಿರಿಯರು ಕಿರಿಯರಿಗೆ ಬುದ್ಧಿಮಾತು ಹೇಳುತ್ತಿದ್ದರು. ಅವರಿಗೆ ಮಕ್ಕಳೊಂದಿಗೆ ಬೆರೆಯಲು ಸಮಯವಿತ್ತು. ಆದರೆ ಪ್ರಸ್ತುತ ಕಾಲಘಟ್ಟದಲ್ಲಿ ಪಾಲಕರು ತಮ್ಮ ತಮ್ಮ ಉದ್ಯೋಗದಲ್ಲಿಯೇ ಹೆಚ್ಚು ಗಮನಹರಿಸುವುದರಿಂದ ಮಕ್ಕಳ ಕುರಿತು ಗಮನ ನೀಡಲು ಸಾಧ್ಯವಾಗುತ್ತಿಲ್ಲ. ಶಾಲೆಯಲ್ಲಿ ಶಿಕ್ಷಕರೇ ಮಕ್ಕಳ ಬಗ್ಗೆ ಗಮನ ಹರಿಸಬೇಕಾದ ಅನಿವಾರ್ಯತೆಯಿದೆ ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ರವಿಶಂಕರ್ ರಾವ್ ಹೇಳಿದರು.
ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸಪ್ನಾ ಎನ್.ಶೆಟ್ಟಿ, ಎಸ್.ಆರ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್, ಎಸ್.ಆರ್. ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಭಗವತಿ, ಉಪಪ್ರಾಂಶುಪಾಲ ದೀಪಕ್ ಎನ್., ಎಸ್.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯಶಿಕ್ಷಕ ಗೋಪಾಲ ಆಚಾರ್ಯ, ದೈಹಿಕ ಶಿಕ್ಷಣ ಶಿಕ್ಷಕರಾದ ಜಯಲಕ್ಷ್ಮೀ ಮತ್ತು ಬಸವರಾಜ್ ಉಪಸ್ಥಿತರಿದ್ದರು. ಉಪನ್ಯಾಸಕಿ ಅಶ್ವಿತಾ ಕಾರ್ಯಕ್ರಮ ನಿರೂಪಿಸಿದರು.