ಬಿಜೆಪಿ ಬಂಟ್ವಾಳ ಮಂಡಲದ ವಿಸ್ತೃತ ಕಾರ್ಯಕಾರಿಣಿ ಸಭೆಯನ್ನು ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಉದ್ಘಾಟಿಸಿದರು. ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್ ಮತ್ತಿತರರಿದ್ದರು.
ಬಂಟ್ವಾಳ: ಮುಂಬರುವ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷದ ಕಾರ್ಯಕರ್ತರು ಗ್ರಾಮಮಟ್ಟದಲ್ಲಿ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಹೇಳಿದರು.
ಮತದಾರರ ಕರಡು ಪಟ್ಟಿ ಪ್ರಕಟವಾದ ಬಳಿಕ ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಯಾವುದೇ ಲೋಪ ಅಥವಾ ತಪ್ಪು ಕಂಡು ಬಂದರೆ ಸರಿಪಡಿಸಲು ಕಾರ್ಯಕರ್ತರು ಮುಂದಾಗಬೇಕು ಎಂದರು.
ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು. ವಿಭಾಗ ಪ್ರಭಾರಿ ಭರತೇಶ್, ಮಂಡಲ ಉಪಾಧ್ಯಕ್ಷ ರಾಕೇಶ್ ರೈ ಕಡೆಂಜಿ, ಮಾಜಿ ಶಾಸಕರಾದ ರುಕ್ಮಯ್ಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಜಿಲ್ಲಾ ಕಾರ್ಯದರ್ಶಿ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಕ್ಷೇತ್ರ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ, ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಶಕ್ತಿಕೇಂದ್ರ ಹಾಗೂ ಮಹಾಶಕ್ತಿಕೇಂದ್ರ ಪ್ರಮುಖರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಸ್ವಾಗತಿಸಿದರು. ಹರೀಶ್ ಶೆಟ್ಟಿ ಪಡು ಕಾರ್ಯಕ್ರಮ ನಿರೂಪಿಸಿದರು.