Arrest 
ಉಡುಪಿ

ರೈಲಿನಲ್ಲಿ ಪ್ರಯಾಣಿಕರ ಬ್ಯಾಗ್ ಕಳವು, ಆರೋಪಿ ಸೆರೆ

ಇಂದಿರಾ ಎನ್ ಕೆ

ಕಾಸರಗೋಡು: ರೈಲಿನಲ್ಲಿ ಪ್ರಯಾಣಿಕರೊಬ್ಬ ಪಾಸ್‌ಪೋರ್ಟ್, ಮೊಬೈಲ್ ಫೋನ್ ಇತ್ಯಾದಿ ಸಾಮಗ್ರಿಗಳನ್ನು ಕಳವುಗೈದ ಆರೋಪಿಯನ್ನು ಘಟನೆ ನಡೆದ 24 ತಾಸಿನೊಳಗೆ ಕಾಸರಗೋಡು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ನಿವಾಸಿ ಬರೇಂದ್ರ ರಾವೂತ್ತರ್(37) ಎಂಬಾತನನ್ನು ಕಾಸರಗೋಡು ರೈಲ್ವೆ ಪೊಲೀಸ್ ಠಾಣೆಯ ಎಸ್‌ಐ ಸನಿಲ್ ಕುಮಾರ್ ನೇತೃತ್ವದ ತಂಡ ಬಂಧಿಸಿದೆ.

ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಮಂಗಳ ಲಕ್ಷದ್ವೀಪ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರ 89000 ರೂ. ಮೌಲ್ಯದ ಐಪ್ಯಾಡ್, ಮೊಬೈಲ್ ಫೋನ್, ಪಾಸ್‌ಪೋರ್ಟ್, ಪವರ್ ಬ್ಯಾಂಕ್ ಇದ್ದ ಬ್ಯಾಗನ್ನು ರಾತ್ರಿ ವೇಳೆ ಕಳವುಗೈಯಲಾಗಿತ್ತು. ಕಾಸರಗೋಡು ರೈಲ್ವೆ ನಿಲ್ದಾಣಕ್ಕೆ ತಲುಪಿದಾಗ ಬ್ಯಾಗ್ ಕಳವಾಗಿರುವುದು ಗಮನಕ್ಕೆ ಬಂದಿದ್ದ ತಕ್ಷಣ ಕಾಸರಗೋಡು ರೈಲ್ವೆ ಪೊಲೀಸರಿಗೆ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು, ಸಿಸಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿ ಕಾಸರಗೋಡು ಹೊಸ ಬಸ್ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದರು.