ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ರೋಗಿ 
ಉಡುಪಿ

ಮಣಿಪಾಲ ಆಸ್ಪತ್ರೆ ಮಹಡಿಯಿಂದ ಜಿಗಿದು ರೋಗಿ ಆತ್ಮಹತ್ಯೆ ಯತ್ನ

ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರು ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಉಡುಪಿ: ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರು ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ತೀರ್ಥಹಳ್ಳಿಯ ರಾಜೇಶ್​ ಆರ್​. ಶೆಟ್ಟಿ ಗಾಯಗೊಂಡವರು. ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಇವರನ್ನು 2 ದಿನದ ಹಿಂದೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬುಧವಾರ ಮಧ್ಯಾಹ್ನ ವಾರ್ಡ್​ನ ಗಾಜಿನ ಕಿಟಕಿ ಹಾಗೂ ಕಟ್ಟಡದ ಹೊರಭಾಗದ ರಕ್ಷಣಾ ರಚನೆ ಸೇರಿದಂತೆ ಸುರಕ್ಷತಾ ವ್ಯವಸ್ಥೆಗಳನ್ನು ಬಲವಂತವಾಗಿ ಮುರಿದು, ಕಟ್ಟಡದ ಹೊರಭಾಗಕ್ಕೆ ತೆರಳಿ ಅಲ್ಲಿಂದ ಕೆಳಗೆ ಜಿಗಿದು ಗಾಯಗೊಂಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ರೋಗಿಯನ್ನು ರಕ್ಷಿಸಿ, ತುರ್ತು ಚಿಕಿತ್ಸೆಗೆ ಸ್ಥಳಾಂತರಿಸಿದರು. ರೋಗಿಯ ಸ್ಥಿತಿ ಸ್ಥಿರವಾಗಿದ್ದು, ಆಸ್ಪತ್ರೆಯ ವೈದ್ಯರ ಆರೈಕೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವೈದ್ಯಕಿಯ ಅಧೀಕ್ಷಕ ಡಾ. ಅವಿನಾಶ್​ ಶೆಟ್ಟಿ ಘಟನೆ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಮಾಹಿತಿ ನೀಡಲಾಗಿದ್ದು, ಆಸ್ಪತ್ರೆಯು ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದು ತಿಳಿಸಿದ್ದಾರೆ.