ACCIDENT 
ಉಡುಪಿ

ಆಂಬುಲೆನ್ಸ್ ಪಲ್ಟಿಯಾಗಿ ರೋಗಿ ಮೃತ್ಯು

ಕಾಸರಗೋಡು: ಬಂದ್ಯೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಮಗುಚಿ ಬಿದ್ದು ಅದರಲ್ಲಿದ್ದ ರೋಗಿ ದಾರುಣವಾಗಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಉಪ್ಪಳ ಕೆಎಸ್‌ಇಬಿಯ ಗುತ್ತಿಗೆದಾರ ಬಂದ್ಯೋಡು ಸಮೀಪದ ಅಡ್ಕ ನಿವಾಸಿ ಅಶೋಕ(41) ಮೃತರು. ಅವರ ಪತ್ನಿ ಪ್ರತಿಭಾ, ಸಹೋದರ ರಾಜೇಶ್, ರಾಜೇಶ ಅವರ ಪತ್ನಿ ಹಾಗೂ ಆಂಬುಲೆನ್ಸ್ ಚಾಲಕ ಗಾಯಗೊಂಡಿದ್ದು ಅವರನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನಾರೋಗ್ಯ ನಿಮಿತ್ತ ಉಪ್ಪಳದ ಖಾಸಗಿ ಆಸ್ಪತ್ರೆಯಲ್ಲಿ ಅಶೋಕ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಅಪಘಾತ ಸಂಭವಿಸಿದೆ.