ಡಿಕ್ಕಿ ಹೊಡೆದ ಟೆಂಪೋ ಟ್ರಾವೆಲರ್ 
ಉಡುಪಿ

ಟೆಂಪೋ ಟ್ರಾವೆಲರ್ ಡಿಕ್ಕಿ, ಪಾದಚಾರಿ ಸಾವು

ಬೆಳ್ತಂಗಡಿ: ವೇಣೂರು ಮುಖ್ಯಪೇಟೆಯಲ್ಲಿ ರಸ್ತೆ ದಾಟುತ್ತಿದ್ದಾಗ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಬಜಿರೆ ಗ್ರಾಮದ ಕಂಗಿತ್ತಿಲು ನಿವಾಸಿ ಆನಂದ ಪೂಜಾರಿ (60) ಮೃತಪಟ್ಟಿದ್ದಾರೆ.
ವೇಣೂರು ಮುಖ್ಯಪೇಟೆಯ ಬಸ್ ನಿಲ್ದಾಣದ ಬಳಿ ಹೆದ್ದಾರಿ ದಾಟುತ್ತಿದ್ದ ವೇಳೆ ಬೆಳ್ತಂಗಡಿ ಕಡೆಯಿಂದ ಮೂಡುಬಿದಿರೆ ಕಡೆಗೆ ಹೋಗುತ್ತಿದ್ದ ಟೂರಿಸ್ಟ್ ಟೆಂಪೋ ಟ್ರಾವೆಲ್ಲರ್ ಡಿಕ್ಕಿಯಾಗಿತ್ತು. ಗಂಭೀರವಾಗಿ ಗಾಯಗೊಂಡ ಅವರಿಗೆ ವೇಣೂರಿನ ಖಾಸಗಿ ಕ್ಲಿನಿಕ್‌ನಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ಮೃತಪಟ್ಟಿದ್ದಾರೆ. ವೇಣೂರು ಪೊಲೀಸರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ, ವಾಹನ ವಶಪಡಿಸಿಕೊಂಡಿದ್ದಾರೆ.