ACCIDENT 
ಉಡುಪಿ

ವಾಹನ ಡಿಕ್ಕಿಯಾಗಿ ಪಾದಚಾರಿ ಗಂಭೀರ

ಪಡುಬಿದ್ರಿ: ಟಾಟಾ ಏಸ್ ಗೂಡ್ಸ್ ವಾಹನ ಡಿಕ್ಕಿಯಾಗಿ ಯಮನಪ್ಪ ತಿಮ್ಮಣ್ಣ ಪೂಜಾರ ಎಂಬುವರು ಗಂಭೀರ ಗಾಯಗೊಂಡಿರುವ ಘಟನೆ ಹೆಜಮಾಡಿಕೋಡಿ ರಸ್ತೆಯಲ್ಲಿ ಸೋಮವಾರ ನಡೆದಿದೆ.
ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅವರು ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಘಾತ ನಡೆಸಿದ ವಾಹನ ಪರಾರಿಯಾಗಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಡಿಕ್ಕಿ, ಬೈಕ್ ಸವಾರನಿಗೆ ಗಾಯ

ಪಡುಬಿದ್ರಿ: ಕಾರು ಡಿಕ್ಕಿಯಾಗಿ ಬೈಕ್ ಸವಾರ ಪಾದೆಬೆಟ್ಟು ಗ್ರಾಮದ ನಾಗರಾಜ ಆಚಾರ್ಯ ಎಂಬುವರು ಗಾಯಗೊಂಡ ಘಟನೆ ರಾಜ್ಯ ಹೆದ್ದಾರಿ 1ರ ಪಡುಬಿದ್ರಿ ಪೇಟೆ ಬಳಿ ಮಂಗಳವಾರ ನಡೆದಿದೆ. ಗಾಯಾಳು ಪಡುಬಿದ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.