ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಗದಿಪಡಿಸಿದ ವೇಗಕ್ಕಿಂತ ಜಾಸ್ತಿ ವೇಗದಲ್ಲಿ ಸಂಚರಿಸುತ್ತಿದ್ದ ಹಲವು ವಾಹನಗಳಿಗೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ದಂಡ ವಿಧಿಸಿ, ಕಾನೂನು ಪಾಲನೆ ಅರಿವು ಮೂಡಿಸಿದರು.
ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಗದಿಪಡಿಸಿದ ವೇಗಕ್ಕಿಂತ ಜಾಸ್ತಿ ವೇಗದಲ್ಲಿ ಸಂಚರಿಸುತ್ತಿದ್ದ ಹಲವು ವಾಹನಗಳಿಗೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ಶನಿವಾರ ಸಂಜೆ ಮೋಟಾರು ನಿಯಮ ಕಾಯ್ದೆಯಡಿ ದಂಡ ವಿಧಿಸಿ, ಕಾನೂನು ಪಾಲನೆ ಅರಿವು ಮೂಡಿಸಿದರು.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ಯಾಚರಣೆಗೆ ಇಳಿದ ಪೊಲೀಸರು, ಈ ಪ್ರದೇಶದಲ್ಲಿ ನಿಗದಿಪಡಿಸಿದ (80 ಕಿ.ಮೀ.) ವೇಗಕ್ಕಿಂತ ಹೆಚ್ಚು ವೇಗದಲ್ಲಿ ಸಂಚರಿಸಿದ ವಾಹನಗಳನ್ನು ವೇಗ ಪರಿಶೀಲನೆ ಯಂತ್ರ ಮೂಲಕ ಪತ್ತೆ ವಾಡಿ, ವೇಗ ಮಿತಿ ಬಗ್ಗೆ ವಾಹಿತಿ ನೀಡಿ, ದಂಡ ವಿಧಿಸಿದರು.
ಕಾರ್ಯಾಚರಣೆಯಲ್ಲಿ ಟ್ರಾಫಿಕ್ ಠಾಣೆ ಪಿಎಸ್‌ಐ ಸುಧಾ ಪ್ರಭು, ಎಎಸ್‌ಐಗಳಾದ ಸುರೇಶ್, ನಾಗರಾಜ್ ಕುಲಾಲ್, ನಾಗಪ್ಪ, ಹೆಡ್ ಕಾನ್‌ಸ್ಟೆಬಲ್ ಕೇಶವ, ವೀರಪ್ಪ, ಶ್ರೀನಿವಾಸ, ಕಾನ್‌ಸ್ಟೆಬಲ್ ಪ್ರಸಾದ್, ವೆಂಕಟೇಶ್ ಇದ್ದರು.
ಹೆಚ್ಚುತ್ತಿರುವ ರಸ್ತೆ ಅಪಘಾತಕ್ಕೆ ವಾಹನಗಳ ಅತಿಯಾದ ವೇಗ ಒಂದು ಕಾರಣವಾಗಿದ್ದು, ಮೇಲಧಿಕಾರಿಗಳ ವಾರ್ಗದರ್ಶನದಲ್ಲಿ ಈಗಾಗಲೇ ಮೂರ್ನಾಲ್ಕು ಬಾರಿ ಅತಿ ವೇಗ ಪರಿಶೀಲನೆ ಕಾರ್ಯಾಚರಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಡಲಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯ ಹೆದ್ದಾರಿ ಸಹಿತ ಅಗತ್ಯ ಕಡೆಗಳಲ್ಲಿ ಕಾರ್ಯಾಚರಣೆ ಮುಂದುವರಿಸಲಾಗುವುದು.