crime 
ಉಡುಪಿ

ಮರಳು ಅಕ್ರಮವಾಗಿ ಸಾಗಿಸುತ್ತಿದ್ದ ಪಿಕಪ್ ವಶ

ಬಂಟ್ವಾಳ: ಬುಟ್ಟಿಗಳ ಸಹಾಯದಿಂದ ಮರಳನ್ನು ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಡಿ ವಾಹನವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಮಾಹಿತಿಯಂತೆ ಬಂಟ್ವಾಳ ಬಡಗಬೆಳ್ಳೂರು ಗ್ರಾಮದ ತರಾವು ಎಂಬಲ್ಲಿಗೆ ಪೊಲೀಸರು ದಾಳಿ ನಡೆಸಿದರು. ಆಗ ಮರಳು ತುಂಬಿಸಿಕೊಂಡು ಬರುತ್ತಿದ್ದ ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.