ಕುಚ್ಚೂರು ಹೆರ್ಗ ವಿಠ್ಠಲ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಪ್ರಮುಖರಾದ ಡಾ.ಭಾರ್ಗವಿ ಆರ್.ಐತಾಳ್, ಚರಣ್ ರಾಜ್ ಜೋಗಿ, ಪ್ರಭಾವತಿ ಮೊದಲಾದವರಿದ್ದರು.
ಹೆಬ್ರಿ: ನಾವೆಲ್ಲರೂ ಗಿಡಗಳನ್ನು ನೆಟ್ಟು ಪೋಷಿಸಬೇಕು. ಆ ಕಾರ್ಯ ಎಲ್ಲೆಡೆ ನಡೆಯಬೇಕು. ಇಲ್ಲವಾದಲ್ಲಿ ಮುಂದೊಂದು ದಿನ ಆಕ್ಸಿಜನ್‌ಗಾಗಿ ಹುಡುಕಾಡುವ ಕಾಲ ಬರಬಹುದು ಎಂದು ಹೆಬ್ರಿ ರಾಘವೇಂದ್ರ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷೆ ಡಾ.ಭಾರ್ಗವಿ ಆರ್.ಐತಾಳ್ ಹೇಳಿದರು.
ಹೆಬ್ರಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಕುಚ್ಚೂರು ಹೆರ್ಗ ವಿಠ್ಠಲ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯ ನಿಸರ್ಗ ಇಕೋ ಕ್ಲಬ್, ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಮೇರಾ ಭಾರತ್ ಉಡುಪಿ ಜಿಲ್ಲೆ ಮತ್ತು ಕುಚ್ಚೂರು ಕುಡಿಬೈಲು ಶಾಂತಿನಿಕೇತನ ಯುವ ವೃಂದ ಸಹಕಾರದಲ್ಲಿ ಕುಚ್ಚೂರು ಹೆರ್ಗ ವಿಠ್ಠಲ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಉಪ ವಲಯ ಅರಣ್ಯಾಧಿಕಾರಿ ಚರಣ್ ರಾಜ್ ಜೋಗಿ ಮಾತನಾಡಿದರು. ಕುಚ್ಚೂರು ಹೆರ್ಗ ವಿಠ್ಠಲ ಶೆಟ್ಟಿ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಪ್ರಭಾವತಿ ಅಧ್ಯಕ್ಷತೆ ವಹಿಸಿದ್ದರು. ಹೆಬ್ರಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂ ಉಪಾಧ್ಯಕ್ಷ ಸಂಜೀವ ಆರ್ಡಿ, ಪ್ರಧಾನ ಕಾರ್ಯದರ್ಶಿ ಸುಕುವಾರ್ ಮುನಿಯಾಲ್, ಅರಣ್ಯ ಇಲಾಖೆಯ ಕನಕಪ್ಪ ಮುಂತಾದವರು ಉಪಸ್ಥಿತರಿದ್ದರು. ಹೆಬ್ರಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ನರೇಂದ್ರ ಎಸ್.ಮರಸಣಿಗೆ ವಂದಿಸಿದರು.