ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಅಂಗವಾಗಿ ಸಾರ್ವಜನಿಕರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸುವ ಉದ್ದೇಶದಿಂದ ವಿಶೇಷ ಬಂದೋಬಸ್ತ್ ಕೈಗೊಳ್ಳಲಾಗಿದೆ. ನಗರದ ವಿವಿಧ ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿಯಾಗಿ 45 ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಓರ್ವ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಇಬ್ಬರು ಡಿವೈಎಸ್ಪಿಗಳು, 6 ಮಂದಿ ಪೊಲೀಸ್ ಇನ್ಸ್ಪೆಕ್ಟರ್ಗಳು, 25 ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳು, 35 ಸಹಾಯಕ ಸಬ್ ಇನ್ಸ್ಪೆಕ್ಟರ್ಗಳು, 186 ಹೆಡ್ ಕಾನ್ಸ್ಟೇಬಲ್ ಮತ್ತು ಪೊಲೀಸ್ ಕಾನ್ಸ್ಟೇಬಲ್, ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ 50 ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಹೆಚ್ಚುವರಿ ಭದ್ರತೆಗಾಗಿ 1 ಕೆಎಸ್ಆರ್ಪಿ ತುಕಡಿ, 9 ಡಿಎಆರ್ ತುಕಡಿ, 3 ಅಗ್ನಿಶಾಮಕ ದಳದ ತಂಡಗಳು, 2 ಆಂಬ್ಯುಲೆನ್ಸ್ ಹಾಗೂ 3 ಡ್ರೋನ್ ತಂಡಗಳನ್ನು ನಿಯೋಜಿಸಲಾಗಿದೆ.
ಪಾರ್ಕಿಂಗ್ಗಾಗಿ ಎಂ.ಜಿ.ಎಂ. ಮೈದಾನ, ರಾಜಾಂಗಣ ಪಾರ್ಕಿಂಗ್ ಸ್ಥಳ, ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನ ಪಾರ್ಕಿಂಗ್ ಸ್ಥಳ, ಬೀಡಿನಗುಡ್ಡೆ ಮೈದಾನ, ಬೀಡಿನಗುಡ್ಡೆ ಕ್ರೀಡಾಂಗಣ, ವಿದ್ಯೋದಯ ಶಾಲೆ ಪಾರ್ಕಿಂಗ್ ಸ್ಥಳ, ಮಾಂಡವಿ ರಾಯಲ್ ಗಾರ್ಡನ್ ಪಾರ್ಕಿಂಗ್ ಸ್ಥಳವನ್ನು ಗುರುತಿಸಲಾಗಿದೆ.
ಹಿಂದಿನ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರ ಗುರುತಿಸುವಿಕೆಗಾಗಿ ಫಿಂಗರ್ಪ್ರಿಂಟ್ ಸ್ಕಾ$ನರ್ಗಳನ್ನು ಬಳಸಲಾಗುತ್ತಿದ್ದು, ಡ್ರೋನ್ ಕ್ಯಾಮೆರಾ ಮೂಲಕ ಕಾರ್ಯಕ್ರಮದ ಸಂಪೂರ್ಣ ಪ್ರದೇಶದ ಮೇಲೆ ನಿಗಾ ವಹಿಸಲಾಗುತ್ತಿದೆ.