ನೀರ್ಕೆರೆ ಶಾಲೆಯಲ್ಲಿ ಹೊಸ ತರಗತಿ ಕೊಠಡಿಗಳ, ಸ್ಮಾರ್ಟ್ ತರಗತಿ ಉದ್ಘಾಟನೆ, ಕೊಠಡಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಎ.ಕೋಟ್ಯಾನ್, ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗೂರ್ ಮೊದಲಾದವರಿದ್ದರು.
ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಪ್ರಧಾನಿ 12 ವರ್ಷಗಳಿಂದ ಅಭಿವೃದ್ಧಿ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಶಾಲೆ, ಮಕ್ಕಳ ಬಗ್ಗೆ ಕಾಳಜಿ ಇದ್ದರೆ ಒಂದು ಸರ್ಕಾರಿ ಶಾಲೆಯನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದಕ್ಕೆ ಶಾಸಕ ಉಮಾನಾಥ ಎ.ಕೋಟ್ಯಾನ್ ಮಾದರಿ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ನೀರ್ಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಎಂಆರ್‌ಪಿಎಲ್‌ನ ಅನುದಾನದಲ್ಲಿ ನಿರ್ಮಾಣಗೊಂಡಿರುವ ಹೊಸ ತರಗತಿ ಕೊಠಡಿ, ಪೋಷಕರು ಮತ್ತು ದಾನಿಗಳ ಸಹಕಾರದಿಂದ ನಿರ್ಮಿಸಲಾದ ಗ್ರಂಥಾಲಯ ಒಳಗೊಂಡ ಸ್ಮಾರ್ಟ್ ತರಗತಿ ಜ್ಞಾನಾಂಬುದಿಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಶಾಸಕ ಉಮಾನಾಥ ಎ.ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗೂರ್, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಚ್ೀ ಮ್ಯಾನೇಜರ್ ಎಂ.ಕೆ.ರಾವ್, ಮೂಡುಬಿದಿರೆ ತಾಲೂಕು ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಹೊಳ್ಳ, ದೋಟ-ತೆಂಕಮಿಜಾರು ಗ್ರಾಪಂ ಮಾಜಿ ಅಧ್ಯಕ್ಷೆ ಶಾಲಿನಿ ಸಾಲ್ಯಾನ್, ಉಪಾಧ್ಯಕ್ಷ ಕರುಣಾಕರ ಶೆಟ್ಟಿ, ಸದಸ್ಯೆ ಜಯಲಕ್ಷ್ಮೀ ಶೆಟ್ಟಿಗಾರ್, ಪಿಡಿಒ ರೋಹಿಣಿ ಬಿ., ಎಸ್‌ಡಿಎಂಸಿ ಅಧ್ಯಕ್ಷ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಡಾ.ಪ್ರತಿಮಾ ಎಚ್.ಪಿ. ಸ್ವಾಗತಿಸಿದರು. ಸವಿತಾ ವಿ.ಕೋಟ್ಯಾನ್ ನಿರೂಪಿಸಿದರು. ಚಾಲಚಂದ್ರ ಜಿ.ಆಚಾರಿ ವಂದಿಸಿದರು.
ಗೌರವಾರ್ಪಣೆ
ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಜಾನ್ಹವಿ, ಪ್ರಜ್ವಲ್, ದೀಪಾ ಅವರನ್ನು ಸನ್ಮಾನಿಸಲಾಯಿತು. ಎಂಆರ್‌ಪಿಎಲ್ ಸಿಎಸ್‌ಆರ್ ವಿಭಾಗದ ಜನರಲ್ ಮ್ಯಾನೇಜರ್ ಮಂದಾರ್ ವಿ.ಕಾಳೆ, ಉದ್ಯಮಿ, ದಾನಿ ಸುರೇಶ್ ಶೆಟ್ಟಿ, ಕಟ್ಟಡ ನಿರ್ಮಾಣಕ್ಕೆ ಶ್ರಮಿಸಿದ ಮಹೇಶ್, ದಿನೇಶ್, ಗುತ್ತಿಗೆದಾರ ಸಂಪತ್, ವರ್ಗಾವಣೆಗೊಂಡ ಶಿಕ್ಷಕಿ ಹರಿಣಾಕ್ಷಿ ಅವರನ್ನು ಗೌರವಿಸಲಾಯಿತು.