ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅನ್ನಛತ್ರ ಹಾಗೂ ಸಭಾಂಗಣ ನಿರ್ಮಾಣ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಶಾಸಕ ರಾಜೇಶ್ ನಾಕ್, ಡಾ.ಮಂಜಯ್ಯ ಶೆಟ್ಟಿ, ವಾಧವ ಭಟ್, ಕೆ.ಪಿ.ಚಂದ್ರ ಮೋಹನ್ ಮತ್ತಿತರರು ಇದ್ದರು.
ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ನೂತನ ಅನ್ನಛತ್ರ ಹಾಗೂ ಸಭಾಂಗಣ ನಿರ್ಮಾಣ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅಧ್ಯಕ್ಷತೆಯಲ್ಲಿ ನಡೆಯಿತು.
ನಿರ್ಮಾಣ ಕಾಮಗಾರಿಗಳ ಪ್ರಸ್ತುತ ಹಂತ, ತಾಂತ್ರಿಕ ಅಂಶಗಳು, ಅಗತ್ಯ ಮೂಲಸೌಕರ್ಯ, ಕಾಮಗಾರಿಯ ಗುಣಮಟ್ಟ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಕುರಿತು ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳೊಂದಿಗೆ ಚರ್ಚೆ ನಡೆಸಲಾಯಿತು.
ಶಾಸಕ ರಾಜೇಶ್ ನಾಕ್ ಮಾತನಾಡಿ, ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ನಿರ್ಮಿಸಲಾಗುತ್ತಿರುವ ನೂತನ ಅನ್ನಛತ್ರ ಹಾಗೂ ಸಭಾಂಗಣ ಅತ್ಯಂತ ಉಪಯುಕ್ತ ಯೋಜನೆಯಾಗಿದ್ದು, ಕಾಮಗಾರಿಯಲ್ಲಿ ಯಾವುದೇ ವಿಳಂಬವಾಗದಂತೆ ಹಾಗೂ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ ಶ್ರೀ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ, ಮೊಕ್ತೇಸರ ಮಾಧವ ಭಟ್, ಕಾರ್ಯನಿರ್ವಹಣಾಧಿಕಾರಿ ಕೆ.ಪಿ.ಚಂದ್ರ ಮೋಹನ್, ಇಂಜಿನಿಯರ್‌ಗಳಾದ ಲಕ್ಷ್ಮಣ್ ಪೂಜಾರಿ, ಸುಪ್ರೀತ್ ಆಳ್ವ ಉಪಸ್ಥಿತರಿದ್ದರು.