ಪ್ರಿಯದರ್ಶಿನಿ ಸೊಸೈಟಿ ಮೂಡುಬಿದಿರೆ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವ, ಉಚಿತ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಲಾಯಿತು. ಮಾಜಿ ಸಚಿವ ಅಭಯಚಂದ್ರ ಜೈನ್, ಸೊಸೈಟಿ ಅಧ್ಯಕ್ಷ ವಸಂತ ಬೆರ್ನಾಡು, ರೋಟರಿ ಕ್ಲಬ್ ಅಧ್ಯಕ್ಷ ಡಾ.ಆಶೀರ್ವಾದ್ ಮೊದಲಾದವರಿದ್ದರು. 
ಉಡುಪಿ

ಪ್ರಿಯದರ್ಶಿನಿ ಸೊಸೈಟಿ ಕಾರ್ಯ ಶ್ಲಾಘನೀಯ

ಇಂದಿರಾ ಎನ್ ಕೆ

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ಜನಸ್ನೇಹಿ ಸೇವೆ ನೀಡಿ ಅಲ್ಪಾವಧಿಯಲ್ಲೇ ಪ್ರಗತಿ ಸಾಧಿಸಿರುವ ಪ್ರಿಯದರ್ಶಿನಿ ಸೊಸೈಟಿ ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿ ಕೊಂಡಿರುವುದು ಶ್ಲಾಘನಾರ್ಹ ಕಾರ್ಯ. ಜನರು ಆರೋಗ್ಯದ ಬಗ್ಗೆ ನಿರ್ಲಕ್ಷೃ ವಹಿಸಬಾರದು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.
ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಮೂಡುಬಿದಿರೆ ಶಾಖೆ ಪ್ರಥಮ ವರ್ಷದ ವಾರ್ಷಿಕೋತ್ಸವ, ಉಚಿತ ವೈದ್ಯಕೀಯ ಶಿಬಿರ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಕೊಡಂಗಲ್ಲು ರಾಣೆಯಾರ್ ಸಭಾಭವನದಲ್ಲಿ ಭಾನುವಾರ ನಡೆಯಿತು.
ಮಾಜಿ ಸಚಿವ ಅಭಯಚಂದ್ರ ಜೈನ್ ಕಾರ್ಯಕ್ರಮ ಉದ್ಘಾಟಿಸಿದರು. ಸೊಸೈಟಿ ಅಧ್ಯಕ್ಷ ವಸಂತ ಬೆರ್ನಾಡ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಅಧ್ಯಕ್ಷ ಡಾ.ಆಶೀರ್ವಾದ್, ದೇವಾಡಿಗರ ಸುಧಾರಕರ ಸಂಘ ಅಧ್ಯಕ್ಷ ಪುರಂದರ ದೇವಾಡಿಗ, ಪುರಸಭೆ ಮಾಜಿ ಸದಸ್ಯರಾದ ಕೊರಗಪ್ಪ, ರೂಪಾ ಸಂತೋಷ್ ಶೆಟ್ಟಿ, ಯುವವಾಹಿನಿ ಅಧ್ಯಕ್ಷ ಗಿರೀಶ್ ಕೋಟ್ಯಾನ್, ಹೀಲಿಂಗ್ ಹ್ಯಾಂಡ್ಸ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಪ್ರಜ್ವಲ್ ಕುಲಾಲ್, ರಾಣಿಯಾರ್ ಸಮಾಜ ಸೇವಾ ಸಂಘ ಅಧ್ಯಕ್ಷ ರಮೇಶ್ ಕೆ.ಎಸ್., ಸೊಸೈಟಿ ನಿರ್ದೇಶಕ ಧನಂಜಯ ಮಟ್ಟು, ರೈತ ಸಂಘ ಮಾರ್ಪಾಡಿ ಘಟಕ ಅಧ್ಯಕ್ಷ ಸುರೇಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಸೊಸೈಟಿ ಮ್ಯಾನೇಜರ್ ಅಭಿಷ್ಠಾ ಜೈನ್ ನಿರೂಪಿಸಿದರು. ಸಿಇಒ ಸುದರ್ಶನ್ ವಂದಿಸಿದರು. ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲು ಆಡಳಿತ ನಿರ್ದೇಶಕ ಡಾ.ಶಿವಾನಂದ ಪ್ರಭು ನೇತೃತ್ವದ ತಂಡ ಆರೋಗ್ಯ ಉಚಿತ ಶಿಬಿರ ನಡೆಸಿಕೊಟ್ಟಿತು.