ಹಳೆಯ ಮಂಗಳೂರಿನ ಛಾಯಾಚಿತ್ರಗಳನ್ನು ಅನವರಣಗೊಳಿಸಲಾಯಿತು. ಕಿಶೋರ್ ಆಳ್ವ, ಡಾ.ಮದನ್ ಮೋಹನ ನಾಯಕ್, , ಅನಿತಾ ಪಿಂಟೋ ಮತ್ತಿತರರಿದ್ದರು.  
ಉಡುಪಿ

ತುಳು ಭಾಷೆ, ಸಂಸ್ಕೃತಿಗೆ ಉತ್ತೇಜನ

ಮಂಗಳೂರು : ಪುರಾತನ ಹಿನ್ನೆಲೆ ಹೊಂದಿರುವ ತುಳು ಭಾಷೆ ಹಾಗೂ ತುಳುನಾಡಿನ ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ, ಸಮುದಾಯ ಹಾಗೂ ಖಾಸಗಿ ರಂಗ ಕೈಜೋಡಿಸಬೇಕಾಗಿದೆ ಎಂದು ಅದಾನಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಅಧ್ಯಕ್ಷ ಕಿಶೋರ್ ಆಳ್ವ ಹೇಳಿದರು.
ಮಂಗಳೂರಿನ ತುಳು ಭವನದಲ್ಲಿ ಎಸ್ .ಯು. ಪಣಿಯಾಡಿ ತುಳುನಾಡ ಚಾವಡಿಯಲ್ಲಿ ಹಿರಿಯ ಛಾಯಾಗ್ರಾಹಕ ಯಜ್ಞ ಕ್ಲಿಕ್ಕಿಸಿದ ಹಳೆಯ ಮಂಗಳೂರಿನ ಛಾಯಾಚಿತ್ರಗಳನ್ನು ಅನಾವರಣಗೊಳಿಸಿ ಮಾತನಾಡಿದರು.
ಯಜ್ಞ ಅವರಿಗೆ ತುಳು ಸಾಹಿತ್ಯ ಅಕಾಡೆಮಿಯ ಚಾವಡಿ ತಮ್ಮನ ನೀಡಿ ಗೌರವಿಸಲಾಯಿತು. ಹಿರಿಯ ಸಾಮಾಜಿಕ ಧುರೀಣ ಹಾಗೂ ಮುಡಿಪು ತುಳು ಸಿರಿ ಮ್ಯೂಸಿಯಂನ ಸ್ಥಾಪಕ ಡಾ.ಮದನ್ ಮೋಹನ ನಾಯಕ್ ಯು.ಎಸ್ .ಪಣಿಯಾಡಿ ತುಳುನಾಡ ಚಾವಡಿ ನಾಮಫಲಕವನ್ನು ಅನಾವರಣ ಮಾಡಿದರು.
ಆರ್ಟ್ ಕೆನರಾ ಟ್ರಸ್ಟ್ ಅಧ್ಯಕ್ಷ ಸುಭಾಷ್ ಚಂದ್ರ ಬಸು ಹಳೇ ಕಾಲದ ಕಪ್ಪು ಬಿಳುಪು ಛಾಯಾಚಿತ್ರಗಳ ಮಹತ್ವದ ಬಗ್ಗೆ ಮಾತನಾಡಿದರು. ಹಿರಿಯ ಪತ್ರಕರ್ತೆ ಅನಿತಾ ಪಿಂಟೋ ಮಾತನಾಡಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು.
ಕಟ್ಟೆಮಾರ್ ಮನೆತನದ ಪ್ರಶಾಂತ್ ಕುಮಾರ್ ಕಟ್ಟೆಮಾರ್, ಹಿರಿಯ ಪತ್ರಕರ್ತ ಆನಂದ ಶೆಟ್ಟಿ, ತುಳು ಅಕಾಡೆಮಿ ಸದಸ್ಯರಾದ ಬೂಬ ಪೂಜಾರಿ ಮಳಲಿ, ಬಾಬು ಕೊರಗ ಪಾಂಗಾಳ ಉಪಸ್ಥಿತರಿದ್ದರು. ತುಳು ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಸ್ವಾಗತಿಸಿದರು, ಕಾರ್ಯಕ್ರಮದ ಸದಸ್ಯ ಸಂಚಾಲಕ ಅಕಾಡೆಮಿ ಸದಸ್ಯ ಸಂತೋಷ್ ಶೆಟ್ಟಿ ಹಿರಿಯಡ್ಕ ಕಾರ್ಯಕ್ರಮ ನಿರೂಪಿಸಿದರು, ಸದಸ್ಯ ಉದ್ಯಾವರ ನಾಗೇಶ್ ಕುಮಾರ್ ವಂದಿಸಿದರು.