ಉಪ್ಪಿನಂಗಡಿಯ ವಿಜಯ-ವಿಕ್ರಮ ಜೋಡುಕರೆ ಕಂಬಳೋತ್ಸವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದರು. ಶಾಸಕ ಅಶೋಕ್ ಕುಮಾರ್ ರೈ, ಚಲನಚಿತ್ರ ನಟ ಅರವಿಂದ ಬೋಳಾರ್, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ ಆರ್. ಮೊದಲಾದವರಿದ್ದರು.
ಉಪ್ಪಿನಂಗಡಿ: ರಾಜಕಾರಣದೊಂದಿಗೆ ಸಮಾಜಸೇವೆ ಮುಖ್ಯ. ಈ ಮಣ್ಣಿನ ಸಂಸ್ಕೃತಿ, ಕ್ರೀಡೆ, ಆಚಾರ-ವಿಚಾರ ಉಳಿಸಿ ಬೆಳೆಸುವ ಕೆಲಸ ರಾಜಕಾರಣಿಗಳಿಂದ ಆಗಬೇಕು. ಆ ಕೆಲಸ ಶಾಸಕ ಅಶೋಕ್ ರೈ ಅವರಿಂದ ಪರಿಣಾಮಕಾರಿಯಾಗಿ ನಡೆಯುತ್ತಿರುವುದು ಶ್ಲಾಘನೀಯ ಎಂದು ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಉಪ್ಪಿನಂಗಡಿಯ ವಿಜಯ-ವಿಕ್ರಮ ಜೋಡುಕರೆ ಕಂಬಳ ಸಮಿತಿಯಿಂದ ಆಯೋಜನೆಗೊಂಡಿರುವ ಉಬಾರ್ ಕಂಬಳೋತ್ಸವದ ಸಭಾಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.
ಇದೊಂದು ಗ್ರಾಮೀಣ ಭಾಗದ ಕ್ರೀಡೆಯಾಗಿದ್ದು, ಅದನ್ನು ಉಳಿಸಿ-ಬೆಳೆಸಿ ಮುಂದಿನ ಪೀಳಿಗೆಗೂ ಉಣಬಡಿಸುವ ಕೆಲಸ ಆಗಬೇಕು. ಹಾಗಾದಾಗ ಈ ಭೂಮಿ ಇರುವವರೆಗೂ ಕಂಬಳಕ್ಕೆ ಅಳಿವು ಬರಲು ಸಾಧ್ಯವಿಲ್ಲ. ನಮ್ಮ ಭಾಗದಲ್ಲಿಯೂ ಹಲವು ಗ್ರಾಮೀಣ ಕ್ರೀಡೆಗಳಿದ್ದು, ಅದಕ್ಕೂ ನಿರಂತರ ಪ್ರೋತ್ಸಾಹ ನೀಡುತ್ತಿರುತ್ತೇನೆ. ಕಂಬಳಕ್ಕೆ ಸರ್ಕಾರ ಅನುದಾನ ನೀಡಿದ್ದು, ಇದು ಕಂಬಳದ ಬೆಳವಣಿಗೆಗೆ ಇನ್ನಷ್ಟು ಸಹಕಾರಿಯಾಗಿದೆ. ಅಶೋಕ್ ಕುಮಾರ್ ರೈ ಶಾಸಕರಾದ ಬಳಿಕ ಹಲವು ಅಭಿವೃದ್ಧಿ ಕಾರ್ಯ ನಡೆಸಿದ್ದು, ಕೆಲವನ್ನು ನಾನು ಖುದ್ದಾಗಿ ಕಂಡಿದ್ದೇನೆ ಎಂದರು.
ಕಂಬಳ ಸಮಿತಿಯ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಚಿವ ಸತೀಶ್ ಜಾರಕಿಹೊಳಿ ಸರಳ ಸಜ್ಜನಿಕೆಯ ರಾಜಕಾರಣಿ. ನುಡಿದಂತೆ ನಡೆಯುವ ಮಂತ್ರಿ. ಲೋಕೋಪಯೋಗಿ ಇಲಾಖೆ ಸಚಿವರಾಗಿ 224 ಶಾಸಕರಿಗೂ ಸಮಾನ ನ್ಯಾಯ ಕೊಡುವ ಸಚಿವರಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಎರಡೂವರೆ ವರ್ಷದಲ್ಲೇ ಲೋಕೋಪಯೋಗಿ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 248 ಕೋ.ರೂ. ಅನುದಾನ ಬಂದಿದೆ ಎಂದರು.
ಚಲನಚಿತ್ರ ನಟ ಅರವಿಂದ ಬೋಳಾರ್, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ ಆರ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳಾದ ಉದಯಕುಮಾರ್ ಶೆಟ್ಟಿ ಮುನಿಯಾಲು, ಇನಾಯತ್ ಅಲಿ, ಎಂ.ಎಸ್. ಮಹಮ್ಮದ್, ಚಿತ್ರನಟರಾದ ಸನಿಲ್ ಗುರು, ಪುಷ್ಪರಾಜ್ ಬೊಳ್ಳಾರ್ ಶುಭ ಹಾರೈಸಿದರು.
ಚಿತ್ರದುರ್ಗದ ಮಾಜಿ ಸಂಸದ ಚಂದ್ರಪ್ಪ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ನವೀನ್ ಭಂಡಾರಿ, ಕೆ.ಪಿ.ಸಿ.ಸಿ. ಸದಸ್ಯ ಪ್ರಸಾದ್ ಕೌಶಲ್ ಶೆಟ್ಟಿ, ರವಿ ಶೆಟ್ಟಿ ಮೂಡಂಬೈಲು, ಗುಣಪಾಲ ಕಡಂಬ, ಜಗನ್ನಾಥ ರೈ, ಉಮಾನಾಥ ಶೆಟ್ಟಿ, ಭರತ್ ಮುಂಡೋಡಿ, ಕೃಷ್ಣಪ್ರಸಾದ್ ಆಳ್ವ, ತೌಸೀಫ್ ಯು.ಟಿ, ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ನಳಿನಿ ಪಿ.ಶೆಟ್ಟಿ, ಮಹಾಬಲ ಶೆಟ್ಟಿ, ವಿನಯ ಸುವರ್ಣ, ಜಯವಿಕ್ರಮ್ ಕಲ್ಲಾಪು, ಸುದೇಶ್ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ ಬೆಳ್ಳಿಪ್ಪಾಡಿ, ಶಿವರಾಮ ಆಳ್ವ, ನಿಹಾಲ್ ಶೆಟ್ಟಿ, ಸುಮಾ ಅಶೋಕ್ ರೈ, ಡಾ. ರಾಜಾರಾಮ್ ಕೆ.ಬಿ., ಜಯಪ್ರಕಾಶ್ ಬದಿನಾರು, ಕೃಷ್ಣ ಪ್ರಸಾದ್ ಭಟ್, ವಿಕ್ರಂ ಶೆಟ್ಟಿ ಅಂತರ, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಸಮಿತಿಯ ಗೌರವಾಧ್ಯಕ್ಷ ಉಮೇಶ್ ಶೆಣೈ ಎನ್, ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಉಪಾಧ್ಯಕ್ಷರಾದ ವಿದ್ಯಾಧರ ಜೈನ್, ರಾಮಚಂದ್ರ ಮಣಿಯಾಣಿ, ಸಂಘಟನಾ ಕಾರ್ಯದರ್ಶಿಗಳಾದ ಯೋಗೀಶ್ ಎಸ್.ಸಾಮಾನಿ, ದಿಲೀಪ್ ಶೆಟ್ಟಿ ಕರಾಯ ಮತ್ತಿತರರು ಉಪಸ್ಥಿತರಿದ್ದರು.
ಸಾಧಕರಿಗೆ ಗೌರವಾರ್ಪಣೆ
ಸಚಿವ ಸತೀಶ್ ಜಾರಕಿಹೊಳಿ, ಉದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಾಸ್ಟರ್ ಪ್ಲಾನರಿಯ ಎಸ್.ಕೆ.ಆನಂದ್, ಕಂಬಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸದಾಶಿವ ಸಾಮಾನಿ ಸಂಪಿಗೆದಡಿ, ಕಂಬಳ ಮತ್ತು ಶಿಲ್ಪಶಾಸ್ತ್ರದಲ್ಲಿ ಸೇವೆ ಸಲ್ಲಿಸಿದ ಬೆಳ್ಳಿಪ್ಪಾಡಿ ಕೊಡಪೊಟ್ಯ ಸುರೇಶ್ ಕೃಷ್ಣಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ರಾಷ್ಟ್ರೀಯ ಜೂನಿಯರ್ ಕಬಡ್ಡಿ ಚಾಂಪಿಯನ್‌ಶಿಪ್ ಆಟಗಾರ ಆಧೀಶ್ ಶೆಟ್ಟಿ ಬರೆಮೇಲು ಅವರನ್ನು ಅಭಿನಂದಿಸಲಾಯಿತು.
ಕಂಬಳ ಕ್ರೀಡೆಯ ನಿಷೇಧಕ್ಕೆ ಪೇಟಾದವರು ಬಹಳಷ್ಟು ಪ್ರಯತ್ನಪಟ್ಟರು. ಆದರೆ ಪಕ್ಷಾತೀತವಾಗಿ ಕಂಬಳ ಉಳಿಸಲು ಹೋರಾಟ ನಡೆಸಿದ್ದರಿಂದ ನಿಷೇಧ ಸಾಧ್ಯವಾಗಲಿಲ್ಲ. ರಾಜ್ಯ ಸರ್ಕಾರ ಕಂಬಳಕ್ಕೆ 1.15 ಕೋ.ರೂ. ಅನುದಾನ ಮಂಜೂರು ಮಾಡಿದೆ. ಕಂಬಳ ನಮ್ಮ ಸಾಂಸ್ಕೃತಿಕ ಆಸ್ತಿಯಾಗಿದ್ದು, ಇದನ್ನು ಇನ್ನಷ್ಟು ಬೆಳೆಸಬೇಕು.