ಪುಸ್ತಕ ವಿತರಣಾ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಆರೋಗ್ಯ ಸಚಿವ ಯು.ಟಿ.ಖಾದರ್, ಧಾರ್ಮಿಕ ಪರಿಷತ್ ಸದಸ್ಯ ಸುರೇಶ್ ಭಟ್ನಗರ, ಬೆಲ್ಮ ಗ್ರಾಪಂ ನಿಕಟಪೂರ್ವ ಅಧ್ಯಕ್ಷ ಸಿ.ಎಂ.ಸತ್ತಾರ್, ಪ್ರೌಢ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಯೂಸ್ು ಮತ್ತಿತರರು ಉಪಸ್ಥಿತರಿದ್ದರು.  
ಉಡುಪಿ

ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ

ವಿಜಯವಾಣಿ ಸುದ್ದಿಜಾಲ ಉಳ್ಳಾಲ
ದೇರಳಕಟ್ಟೆ ಕೇಂದ್ರ ಭಾಗದಲ್ಲಿ ಸಾಕಷ್ಟು ಖಾಸಗಿ ಶಾಲೆಗಳಿದ್ದರೂ ಸರ್ಕಾರಿ ಶಾಲೆಯಲ್ಲಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಇರುವುದು ಗುಣಮಟ್ಟದ ಶಿಕ್ಷಣ, ಶಾಲೆ ಮೇಲೆ ಪಾಲಕರಿಗಿರುವ ವಿಶ್ವಾಸ ಕಾರಣ. ಶಾಲೆ ಸೋರುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಎರಡು ಕೋಟಿ ರೂ. ಅನುದಾನ ಬಿಡುಗಡೆಗೊಳಿಸಲಾಗಿದೆ. ನೂತನ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.
ದೇರಳಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪದವಿಪೂರ್ವ ಕಾಲೇಜಿನ ಮೇಲಂತಸ್ತಿನ ಕಟ್ಟಡ ಉದ್ಘಾಟನೆ, ಪ್ರಾಥಮಿಕ ಶಾಲಾ ಕಟ್ಟಡ ಶಂಕುಸ್ಥಾಪನೆ, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ನಡೆದ ಪುಸ್ತಕ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಧಾರ್ಮಿಕ ಪರಿಷತ್ ಸದಸ್ಯ ಸುರೇಶ್ ಭಟ್ನಗರ, ಬೆಲ್ಮ ಗ್ರಾಪಂ ನಿಕಟಪೂರ್ವ ಅಧ್ಯಕ್ಷ ಸಿ.ಎಂ.ಸತ್ತಾರ್, ಪ್ರೌಢಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಯೂಸ್ು, ಕಣಚೂರು ಸಮೂಹ ಸಂಸ್ಥೆ ಆಡಳಿತ ನಿರ್ದೇಶಕ ಯು.ಕೆ.ಮೋನು, ಕೊಂಡಾಣ ಕ್ಷೇತ್ರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರ್ಷರಾಜ್ ಮುದ್ಯ, ಕೆಎಸ್‌ಆರ್‌ಟಿಸಿ ಮಾಜಿ ನಿರ್ದೇಶಕ ರಮೇಶ್ ಶೆಟ್ಟಿ ಬೋಳಿಯಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಮತ್ತಿತರರು ಉಪಸ್ಥಿತರಿದ್ದರು.