ಜಿಲ್ಲಾಮಟ್ಟದ ಶೈಕ್ಷಣಿಕ ಸಮಾವೇಶವನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಉದ್ಘಾಟಿಸಿದರು. ಅಮೃತ್ ರೈ ಯು., ವಿಠಲ ಅಬೂರ, ಹರಿಪ್ರಕಾಶ್ ಬೈಲಾದ್ ಮೊದಲಾದವರು ಉಪಸ್ಥಿತರಿದ್ದರು. 
ಉಡುಪಿ

ಗ್ರಾಮೀಣ ಭಾಗದಲ್ಲೂ ಗುಣಮಟ್ಟದ ಶಿಕ್ಷಣ

ಬಂಟ್ವಾಳ: ಶಿಕ್ಷಣ ಕ್ಷೇತ್ರ ಇಂದಿನ ಆಧುನಿಕ ಯುಗದಲ್ಲಿ ಅತ್ಯಂತ ಮಹತ್ವದ ಬದಲಾವಣೆ ಕಾಣುತ್ತಿದ್ದು, ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಯ ಹಿಂದೆ ಓಡದೆ, ಉತ್ತಮ ಮೌಲ್ಯಯುತ ಶಿಕ್ಷಣ ಹಾಗೂ ನೈತಿಕತೆ ಮೈಗೂಡಿಸಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಇಂಥ ಶೈಕ್ಷಣಿಕ ಸಮಾವೇಶ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಹೊಸ ಸ್ಫೂರ್ತಿ ತುಂಬುತ್ತವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಹೇಳಿದರು.
ಬಂಟ್ವಾಳದ ಎಡುವೆಂಚರ್ ಪಪೂ ಕಾಲೇಜಿನಲ್ಲಿ ದ.ಕ. ಜಿಲ್ಲಾ ಪಪೂ ಕಾಲೇಜುಗಳ ಪ್ರಾಂಶುಪಾಲರ ಸಂಘ ಮಂಗಳೂರು ಹಾಗೂ ಎಡುವೆಂಚರ್ ಪಪೂ ಕಾಲೇಜು ಆಶ್ರಯದಲ್ಲಿ ಜಿಲ್ಲಾಮಟ್ಟದ ಶೈಕ್ಷಣಿಕ ಸಮಾವೇಶ, ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಪ್ರಾಂಶುಪಾಲರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಅಧ್ಯಕ್ಷ ಅಮೃತ್ ರೈ ಯು. ಅಧ್ಯಕ್ಷತೆ ವಹಿಸಿದ್ದರು. ಶೈಕ್ಷಣಿಕ ಸಾಲಿನಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ನಿವೃತ್ತ ಪ್ರಾಂಶುಪಾಲರನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ಪಪೂ ಕಾಲೇಜುಗಳ ಉಪನ್ಯಾಸಕರ ಸಂಘದ ಜಂಟಿ ಕಾರ್ಯದರ್ಶಿ ವಿಠಲ ಅಬೂರ, ದ.ಕ. ಜಿಲ್ಲಾ ಘಟಕ ಅಧ್ಯಕ್ಷ ಹರಿಪ್ರಕಾಶ್ ಬೈಲಾದ್, ಕಾಲೇಜಿನ ಕಾರ್ಯದರ್ಶಿ ರಕ್ಷಿತಾ ಅಮೃತ್ ರೈ, ಪ್ರಾಂಶುಪಾಲ ಮಹೇಶ್ ಕೆ.ಎನ್., ಉಪಾಧ್ಯಕ್ಷರಾದ ಡಾ.ಸರೋಜಿನಿ, ಪ್ರೊ.ಜಾರ್ಜ್, ಕಾರ್ಯದರ್ಶಿ ಎ.ಎಸ್.ಆದರ್ಶ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಪಪೂ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಡಾ.ನವೀನ್ ಶೆಟ್ಟಿ ಕೆ. ಸ್ವಾಗತಿಸಿದರು. ಪೊಂಪೈ ಪಿಯು ಕಾಲೇಜು ಪ್ರಾಂಶುಪಾಲ ಡೆಸ್ಮಂಡ್ ಎಡ್ವರ್ಡ್ ಡಿಮೆಲ್ಲೊ ವಂದಿಸಿದರು. ಪಾಂಡ್ಯರಾಜ ಬಲ್ಲಾಳ್ ಪಿಯು ಕಾಲೇಜಿನ ಪ್ರಾಂಶುಪಾಲೆ ಶರ್ಮಿಳಾ ಮುಕೇಶ್ ರಾವ್ ಹಾಗೂ ಎಡುವೆಂಚರ್ ಪಪೂ ಕಾಲೇಜಿನ ಸತೀಶ್ ಆಚಾರ್ಯ ವಂದಿಸಿದರು.

ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕಠಿಣ ಪರಿಶ್ರಮ ಮತ್ತು ಸರಿಯಾದ ಮಾರ್ಗದರ್ಶನ ಅಗತ್ಯ. ನಮ್ಮ ಸಂಸ್ಥೆ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಲು ಸದಾ ಮುಂಚೂಣಿಯಲ್ಲಿದೆ.

— ಅಮೃತ್ ರೈ ಯು., ಅಧ್ಯಕ್ಷ ಎಡುವೆಂಚರ್ ಪಪೂ ಕಾಲೇಜು