ಧಾರವಾಢದ ಜೆಎಸ್ಎಸ್ ಹಾಲಭಾವಿ ಸ್ಕೂಲ್ ಆಫ್ ಆರ್ಟ್ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಡಾ. ಭಾರತಿ ಮರವಂತೆ ಅವರಿಗೆ 70ನೇ ಕನ್ನಡ ರಾಜ್ಯೋತ್ಸವದ ನಿಮಿತ್ತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
* ರಂಗೋಲಿಯ ಖ್ಯಾತ ಕಲಾವಿದೆ
* ಧಾರವಾಡದಲ್ಲಿ ಗೌರವ ಸನ್ಮಾನ
ಉಡುಪಿ: ರಂಗೋಲಿಯ ಖ್ಯಾತ ಕಲಾವಿದೆ ಹಾಗೂ ಸಂಶೋಧಕಿ ಡಾ.ಭಾರತಿ ಮರವಂತೆ ಅವರಿಗೆ ರಾಷ್ಟ್ರೀಯ ದೃಶ್ಯ ಕಲಾ ಅಕಾಡೆಮಿ ಧಾರವಾಡದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವದ ನಿಮಿತ್ತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಧಾರವಾಢದ ಜೆಎಸ್ಎಸ್ ಹಾಲಭಾವಿ ಸ್ಕೂಲ್ ಆಫ್ ಆರ್ಟ್ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿರುವ ಅವರು, ಪ್ರಸ್ತುತ ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿಯ ಸದಸ್ಯೆಯಾಗಿದ್ದಾರೆ.