ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಜೂನಿಯರ್ ರೆಡ್‌ಕ್ರಾಸ್ ಘಟಕದ ಉದ್ಘಾಟನೆ ನಡೆಯಿತು. ಪ್ರಮುಖರಾದ ಜಯಕರ್ ಶೆಟ್ಟಿ, ದಿನಕರ್ ಆರ್.ಶೆಟ್ಟಿ, ಶಿವರಾಮ ಶೆಟ್ಟಿ, ಹವ್ದಾ, ಉಜ್ವಲ್ ಯು.ಮೊಗವೀರ ಮತ್ತಿತರರಿದ್ದರು. 
ಉಡುಪಿ

ರೆಡ್‌ಕ್ರಾಸ್ ಮಾನವೀಯ ಪ್ರತೀಕ

ಇಂದಿರಾ ಎನ್ ಕೆ
ಕುಂದಾಪುರ: ರೆಡ್‌ಕ್ರಾಸ್ ಕೇವಲ ಸಂಸ್ಥೆಯಲ್ಲ, ಅದು ಮಾನವೀಯತೆ ಪ್ರತೀಕವಾಗಿದೆ. ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸುವ ಸೇವಾ ಮನೋಭಾವ, ಸಮಾಜ ಸೇವೆ, ಆರೋಗ್ಯ ಜಾಗೃತಿ ಹಾಗೂ ಪ್ರಥಮ ಚಿಕಿತ್ಸೆ ಅರಿವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ಜೂನಿಯರ್ ರೆಡ್‌ಕ್ರಾಸ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ತಾಲೂಕು ಟಕ ಅಧ್ಯಕ್ಷ ಜಯಕರ್ ಶೆಟ್ಟಿ ಹೇಳಿದರು.
ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಆಯೋಜಿಸಲಾದ ಜೂನಿಯರ್ ರೆಡ್‌ಕ್ರಾಸ್ ಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಉಪಪ್ರಾಂಶುಪಾಲ ಚಂದ್ರಶೇಖರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಟಕ ಸಂಯೋಜಕ ದಿನಕರ್ ಆರ್.ಶೆಟ್ಟಿ ನೂತನ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸಂಸ್ಥೆ ವತಿಯಿಂದ ಪ್ರಥಮ ಚಿಕಿತ್ಸೆ ಪೆಟ್ಟಿಗೆಯನ್ನು ಶಾಲಾ ಉಪಪ್ರಾಂಶುಪಾಲ ಚಂದ್ರಶೇಖರ್ ಶೆಟ್ಟಿ ಅವರಿಗೆ ಹಸ್ತಾಂತರಿಸಲಾಯಿತು.
ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಟಕದ ಖಜಾಂಚಿ ಶಿವರಾಮ ಶೆಟ್ಟಿ, ಜೂನಿಯರ್ ರೆಡ್‌ಕ್ರಾಸ್ ಟಕ ಅಧ್ಯಕ್ಷೆ ಹವ್ದಾ, ಕಾರ್ಯದರ್ಶಿ ಉಜ್ವಲ್ ಯು.ಮೊಗವೀರ ಉಪಸ್ಥಿತರಿದ್ದರು. ಅಶ್ವಿನಿ ಸ್ವಾಗತಿಸಿದರು. ರಜನಿ ವಂದಿಸಿದರು. ವಿದ್ಯಾ ನಿರೂಪಿಸಿದರು.