ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ದಾನಿ ಧರ್ಣಪ್ಪ ಗೌಡ ಅವರನ್ನು ಸನ್ಮಾನಿಸಲಾಯಿತು. ಪ್ರಮುಖರಾದ ಶೈಲಜಾ ಶೆಣೈ, ವಿದ್ಯಾವತಿ, ವೆಂಕಟ್ರಮಣ ಕುದ್ರೆತ್ತಾಯ, ನೀರಜ್ ಕುಮಾರ್ ರೈ, ಯತೀಶ್ ಮೊದಲಾದವರು ಉಪಸ್ಥಿತರಿದ್ದರು.
ಕಡಬ: ದೇವರ ಮೇಲೆ ಅಪಾರ ನಂಬಿಕೆಯನ್ನಿಕೊಂಡು ನಮ್ಮ ಹಿರಿಯರು ಧಾರ್ಮಿಕ ಆಚರಣೆಗಳನ್ನು ಜೀವನದಲ್ಲಿ ಆಳವಡಿಸಿಕೊಂಡಿದ್ದರು. ಆದರೆ ಬದಲಾದ ಕಾಲಘಟ್ಟದಲ್ಲಿ ಧಾರ್ಮಿಕ ಆಚರಣೆಯಲ್ಲಿ ನಂಬಿಕೆ ಕಳೆದುಕೊಳ್ಳುವ ಹಂತಕ್ಕೆ ತಲುಪಿದ್ದೇವೆ. ಮಕ್ಕಳನ್ನು ಶ್ರದ್ಧಾಕೇಂದ್ರಗಳಿಗೆ ಕರೆದೊಯ್ಯುವುದು, ಧಾರ್ಮಿಕ ಆಚರಣೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರಣೆ ನೀಡುವ ಕರ್ತವ್ಯ ಹಿರಿಯ ಮೇಲಿದೆ ಎಂದು ಉಪ್ಪಿನಂಗಡಿ ಧಾರ್ಮಿಕ ಮುಖಂಡರಾದ ಶೈಲಜಾ ಶೆಣೈ ಹೇಳಿದರು.
ಕೊಲ ಗ್ರಾಮದ ಆತೂರು ಶ್ರೀ ಸದಾಶಿವ ದೇವಳದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಶ್ರದ್ಧಾಕೇಂದ್ರಗಳ ಅಭಿವೃದ್ಧಿಯಿಂದ ಧರ್ಮ ಜಾಗೃತಿ, ಸಾಮೂಹಿಕ ಆರಾಧನೆಗಳಿಂದ ದೇವರು, ದೇಶ, ಧರ್ಮ, ಸಂಸ್ಕೃತಿ ಉಳಿಸಲು ಸಾಧ್ಯ ಎಂದರು.
ಸಮಿತಿ ಅಧ್ಯಕ್ಷೆ ವಿದ್ಯಾವತಿ ಅಧ್ಯಕ್ಷತೆ ವಹಿಸಿದ್ದರು. ದಾನಿಗಳಾದ ಧರ್ಣಪ್ಪ ಗೌಡ, ಮೋಹಿನಿ ಉಮೇಶ್ ಅವರನ್ನು ಗೌರವಿಸಲಾಯಿತು. ದೇವಸ್ಥಾನ ಪವಿತ್ರಪಾಣಿ ವೆಂಕಟ್ರಮಣ ಕುದ್ರೆತ್ತಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೀರಜ್ ಕುಮಾರ್ ರೈ, ಸದಸ್ಯರಾದ ಯತೀಶ್ ಗುಂಡಿಜೆ, ಸುನೀತ್‌ರಾಜ್ ಶೆಟ್ಟಿ, ಸಂಜೀವ ಸುದೆಂಗಳ, ಗೋಪಾಲ ನಾಯ್ಕ ಉಪಸ್ಥಿತರಿದ್ದರು.
ಸುಜಾತಾ ಜೆ.ಶೆಟ್ಟಿ ಸ್ವಾಗತಿಸಿದರು. ರಂಜಿತಾ ನೀರಜ್ ವಂದಿಸಿದರು. ಮೀನಾಕ್ಷಿ ಕೆ., ಜ್ಯೋತಿ ನಿರೂಪಿಸಿದರು.