ಬ್ರಹ್ಮಾವರ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾ ದಿನದ ಪುರಸ್ಕಾರ ಕಾರ್ಯಕ್ರಮದಲ್ಲಿ ಪತ್ರಕರ್ತ ಸೋಮಶೇಖರ್ ಪಡುಕೆರೆ ಅವರಿಗೆ ಪುರಸ್ಕಾರ ನೀಡಲಾಯಿತು.ಪ್ರಮುಖರಾದ ರಾಜೇಶ್ ಗಾಣಿಗ ಅಚ್ಲಾಡಿ, ಡಾ.ರಮೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.c
ಬ್ರಹ್ಮಾವರ: ಅಂತಾರಾಷ್ಟ್ರೀಯ ಕ್ರೀಡಾಪಟುಗಳ ಸಂದರ್ಶನ ವರದಿಗಿಂತ ಮರೆಯಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಕ್ರೀಡಾ ಜಗತ್ತಿಗೆ ಪರಿಚಯಿಸಿದುದರಲ್ಲಿ ಹೆಚ್ಚು ಆತ್ಮಸಂತೋಷ ಇರುತ್ತದೆ. ವರದಿಗಾರರಿಗೆ ಹುಟ್ಟೂರಿನ ಗೌರವ ಸಂತೋಷ ನೀಡುತ್ತದೆ ಎಂದು 2025ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಸೋಮಶೇಖರ್ ಪಡುಕೆರೆ ಹೇಳಿದರು.
ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಾರ್ಕೂರಿನ ಸುಜ್ಞಾನ ನ್ಯಾಷನಲ್ ಪದವಿಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ತಾಲೂಕುಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾ ದಿನದ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಾಲೂಕು ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ ಅಧ್ಯಕ್ಷತೆ ವಹಿಸಿದ್ದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಸುಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಆಚಾರ್ಯ, ಸಂಸ್ಥೆಯ ಕೋಶಾಧಿಕಾರಿ ಭರತ್ ಶೆಟ್ಟಿ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.