ರೆಸಿಡೆಂಟ್ಸ್ ವಲ್ಫೇರ್ ಅಸೋಶಿಯೇಷನ್ ವತಿಯಿಂದ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀಗೆ ಸನ್ಮಾನಿಸಲಾಯಿತು. ರಮೇಶ್ ಶೆಟ್ಟಿ, ತಾರನಾಥ ಸಾಲ್ಯಾನ್, ಚಂದ್ರಶೇಖರ ಶೆಟ್ಟಿ ಇತರರಿದ್ದರು.
ಗುರುಪುರ: ಸುರತ್ಕಲ್‌ನ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಶಿಯೇಷನ್‌ನ 4ನೇ ವಾರ್ಷಿಕೋತ್ಸವ, ಸ್ನೇಹ ಸಮ್ಮಿಲನ ಸಮಾರಂಭ ಸುರತ್ಕಲ್ ಬಂಟರ ಸಂಘದ ವಠಾರದಲ್ಲಿ ಬುಧವಾರ ನಡೆಯಿತು.
ಅಸೋಸಿಯೇಷನ್ ವತಿಯಿಂದ ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ ಪೂಜಾರಿ ಸುರತ್ಕಲ್ ಅವರನ್ನು ಸನ್ಮಾನಿಸಿ, 1,01,000 ರೂ. ಚೆಕ್ ಹಸ್ತಾಂತರಿಸಲಾಯಿತು.
ಅಸೋಸಿಯೇಷನ್ ಅಧ್ಯಕ್ಷ ರಮೇಶ್ ಶೆಟ್ಟಿ, ಉಪಾಧ್ಯಕ್ಷ ತಾರನಾಥ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಕೋಶಾಧಿಕಾರಿ ನರಸಿಂಹ ಸುವರ್ಣ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಜತೆ ಕಾರ್ಯದರ್ಶಿ ಲಕ್ಷ್ಮೀ ಸಿ. ಆಚಾರ್ಯ, ಗೌರವ ಸಲಹೆಗಾರ ಸತ್ಯಜಿತ್ ಸುರತ್ಕಲ್, ಮಾಜಿ ಕಾರ್ಪೊರೇಟರ್ ನಯನಾ ಆರ್.ಕೋಟ್ಯಾನ್, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಮತ್ತಿತರರು ಇದ್ದರು. ಉದ್ಯಮಿ ದಿನೇಶ್ ಶೆಟ್ಟಿ ಕಬ್ಬಿನಹಿತ್ಲು, ಸಮಾಜಸೇವಕ ಭರತ್, ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಿತು. ರಾಜೇಶ್ವರಿ ಡಿ.ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.