ರೋಟರಿ ಕ್ಲಬ್ ಬಂಟ್ವಾಳ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಆಯ್ದ ಅರ್ಹ 58 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಪ್ರಮುಖರಾದ ರವಿಚಂದ್ರ ಬಂಟ್ವಾಳ, ಮಂಜುನಾಥ ಆಚಾರ್ಯ ಮೊದಲಾದವರಿದ್ದರು.  
ಉಡುಪಿ

ಹಿರಿಯರು, ಶಿಕ್ಷಕರು, ಸೈನಿಕರನ್ನು ಗೌರವಿಸಿ

ಇಂದಿರಾ ಎನ್ ಕೆ
ಬಂಟ್ವಾಳ: ಹಿರಿಯರು, ಶಿಕ್ಷಕರು, ಸೈನಿಕರನ್ನು ಗೌರವಿಸಿ. ಸಮಾಜಕ್ಕೆ ಒಳಿತನ್ನು ಮಾಡಿ, ಮುಂಬರುವ ದಿನಗಳಲ್ಲಿ ತಾವು ಪಡೆದುದಕ್ಕಿಂತ ಹತ್ತು ಪಟ್ಟು ಹೆಚ್ಚು ಮೊತ್ತ ಸಮಾಜಕ್ಕೆ ನೀಡುವಂತಾಗಿ ಎಂದು ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್ ಹೇಳಿದರು.
ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ಭಾನುವಾರ ರೋಟರಿ ಕ್ಲಬ್ ಬಂಟ್ವಾಳ ಆಶ್ರಯದಲ್ಲಿ ಸೇವ್ ಲೈಫ್ ಚಾರಿಟೆಬಲ್ ಟ್ರಸ್ಟ್ ಮಂಗಳೂರು ಹಾಗೂ ಭದ್ರಾ ಗ್ಯಾಸ್ ಏಜನ್ಸಿ ಬಂಟ್ವಾಳ ಸಹಯೋಗದೊಂದಿಗೆ ಬಂಟ್ವಾಳ ತಾಲೂಕಿನ 58 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ರವಿಚಂದ್ರ ಬಂಟ್ವಾಳ, ರೋಟರಿ ಕ್ಲಬ್ ಪೂರ್ವಾಧ್ಯಕ್ಷ ಮಂಜುನಾಥ ಆಚಾರ್ಯ ಮಾತನಾಡಿದರು. ಸೇವ್ ಲೈಫ್ ಚಾರಿಟೆಬಲ್ ಟ್ರಸ್ಟ್‌ನ ಭಾಗ್ಯಶ್ರೀ ಭಂಡಾರ್ಕರ್, ಅಧ್ಯಕ್ಷ ಅರ್ಜುನ್ ಭಂಡಾರ್ಕಾರ್, ರೋಟರಿ ಬಂಟ್ವಾಳ ಕಾರ್ಯದರ್ಶಿ ರವಿರಾಜ ಶೆಟ್ಟಿ ಉಪಸ್ಥಿತರಿದ್ದರು. ರೋಟರಿ ಸದಸ್ಯರಾದ ಮಧ್ವ ಆಚಾರ್ಯ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಕೃಷ್ಣ ನಾಯಕ್ ಅತಿಥಿಗಳನ್ನು ಪರಿಚಯಿಸಿದರು. ಕೋಶಾಧಿಕಾರಿ ಐತಪ್ಪ ಪೂಜಾರಿ ವಂದಿಸಿದರು. ಸದಸ್ಯ ಅಹಮದ್ ಮುಸ್ತಫಾ ನಿರ್ವಹಿಸಿದರು.