ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ನೂತನ ಕಟ್ಟಡಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದರು. ವಿಧಾನಸಭಾದ್ಯಕ್ಷ ಡಾ.ಯು.ಟಿ.ಖಾದರ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಮೊದಲಾದವರಿದ್ದರು.
ಬಂಟ್ವಾಳ: ಒಗ್ಗಟ್ಟು ನಮ್ಮೆಲ್ಲರ ಶಕ್ತಿ. ಸಾಮರಸ್ಯದ ಮೂಲಕ ಜೀವನ ಹಾಗೂ ಸಮಾಜ ಮುನ್ನಡೆಸುವ ಜವಾಬ್ದಾರಿ ನಮ್ಮೆಲ್ಲರದ್ದು. ಭಿನ್ನಾಭಿಪ್ರಾಯವನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ನಾವೆಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಭವಿಷ್ಯದ ಸಮಾಜಕ್ಕೆ ಪ್ರತಿಯೊಬ್ಬರು ಕಟಿಬದ್ಧರಾಗಬೇಕು ಎಂದು ವಿಧಾನಸಭಾದ್ಯಕ್ಷ ಡಾ.ಯು.ಟಿ.ಖಾದರ್ ಹೇಳಿದರು.
ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಕೇಂದ್ರ ಕಚೇರಿಯ ನೂತನ ಕಟ್ಟಡಕ್ಕೆ ಸಜೀಪಮೂಡ ಗ್ರಾಮದ ಸುಭಾಷ್ ನಗರದಲ್ಲಿ ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾಜಿ ಸಚಿವ ಬಿ.ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದರು. ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ಮಾಜಿ ಶಾಸಕ ರುಕ್ಮಯ ಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಜಿಪಂ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಸಜೀಪಮೂಡ ಗ್ರಾಪಂ ಅಧ್ಯಕ್ಷೆ ಶೋಭಾ ಶೆಟ್ಟಿ, ಪ್ರಮುಖರಾದ ಪ್ರಭಾಕರ ಶೆಟ್ಟಿ , ದೈವಪಾತ್ರಿ ಶಂಕರ ಯಾನೆ ಕೋಚ ಪೂಜಾರಿ, ಧರ್ಮಗುರು ಫಾ.ಮೈಕಲ್ ಡಿಸಿಲ್ವ, ಎಸ್.ಸಿದ್ದೀಕ್, ಕೆ.ಮೋಹನ್‌ದಾಸ್ ಪೂಜಾರಿ, ಪದ್ಮಾವತಿ ಶೆಟ್ಟಿ, ವಿಠಲ ಪೂಜಾರಿ, ಸುಂದರ ಪೂಜಾರಿ, ಜಯಶಂಕರ್ ಕಾನ್ಸಾಲೆ, ಕೆ.ಸುಜಾತಾ ಎಂ., ವಾಣಿ ವಸಂತ್, ಆಶಿಶ್ ಪೂಜಾರಿ, ಚಿದಾನಂದ ಎಂ.ಕಡೇಶ್ವಾಲ್ಯ, ಮಮತಾ ಜಿ.ಚೇಳೂರು ಇತರರಿದ್ದರು.
ನಿರ್ದೇಶಕ ಗಿರೀಶ್ ಕುಮಾರ್ ಪೆರ್ವ ಸ್ವಾಗತಿಸಿದರು. ರಮೇಶ್ ಅನ್ನಪ್ಪಾಡಿ ವಂದಿಸಿದರು. ದಿನೇಶ್ ಸುವರ್ಣ ರಾಯಿ ನಿರೂಪಿಸಿದರು.