ಸಾಂದರ್ಭಿಕ ಚಿತ್ರ 
ಉಡುಪಿ

ಎಸ್​ಐಆರ್​ ನೆಪದಲ್ಲಿ ಮನೆಯೊಳಗೆ ಬಂದು ವೃದ್ಧೆಯ ಚಿನ್ನದ ಸರ ದರೋಡೆ

ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ಎಸ್​ ಐ ಆರ್​ ಮಾಹಿತಿ ಪಡೆಯುವ ನೆಪದಲ್ಲಿ ಮನೆಯೊಳಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಏಕಾಂಗಿಯಾಗಿದ್ದ ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ ಕುತ್ತಿಗೆಯಲ್ಲಿದ್ದ 30 ಗ್ರಾಂ ತೂಕದ ಚಿನ್ನದ ಸರವನ್ನು ಬಲವಂತವಾಗಿ ದೋಚಿ ಪರಾರಿಯಾಗಿದ್ದಾರೆ.

ಉಡುಪಿ: ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ಎಸ್​ ಐ ಆರ್​ ಮಾಹಿತಿ ಪಡೆಯುವ ನೆಪದಲ್ಲಿ ಮನೆಯೊಳಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಏಕಾಂಗಿಯಾಗಿದ್ದ ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ ಕುತ್ತಿಗೆಯಲ್ಲಿದ್ದ 30 ಗ್ರಾಂ ತೂಕದ ಚಿನ್ನದ ಸರವನ್ನು ಬಲವಂತವಾಗಿ ದೋಚಿ ಪರಾರಿಯಾಗಿದ್ದಾರೆ.

ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿ ಶಾಂತ ಕಾರಂತ್​ (74) ಸಂತ್ರಸ್ತೆ. ಅ. 7 ರಂದು ಸಂಜೆ ಮನೆ ಬಳಿಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು, ನಾವು ಎಸ್​ ಐ ಆರ್​ ಕುರಿತು ಮಾಹಿತಿ ಸಂಗ್ರಹಿಸಲು ಬಂದಿರುವುದಾಗಿ ತಿಳಿಸಿದ್ದಾರೆ. ಇದನ್ನು ನಂಬಿದ ಶಾಂತ ಕಾರಂತ್​ ಅವರು ಸಹಿ ಹಾಕಲು ಪೆನ್ನು ತರಲು ಮನೆಯ ಒಳಗಡೆ ಹೋಗಿದ್ದಾರೆ. ಈ ವೇಳೆ ಆಕೆಯನ್ನೇ ಹಿಂಬಾಲಿಸಿ ಅಕ್ರಮವಾಗಿ ಮನೆಯೊಳಗೆ ನುಗ್ಗಿದ ಅಪರಿಚಿತ ಖದೀಮರು, ಶಾಂತ ಕಾರಂತ್​ ಅವರನ್ನು ಜೋರಾಗಿ ತಳ್ಳಿ ಆಕೆಯ ಕುತ್ತಿಗೆಯಲ್ಲಿದ್ದ 30 ಗ್ರಾಂ ತೂಕದ ಚಿನ್ನದ ಸರವನ್ನು ಬಲವಂತವಾಗಿ ಕಿತ್ತುಕೊಂಡು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಕುರಿತು ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.