ಚರಣ್​ರಾಜ್​ 
ಉಡುಪಿ

ಗೂಂಡಾ ಕಾಯ್ದೆಯಡಿ ರೌಡಿ ಬಂಧನ

ಗೋಪಾಲಕೃಷ್ಣ ಪಾದೂರ್
ಉಡುಪಿ: ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಆರೋಪದಲ್ಲಿ ನಗರ ಪೊಲೀಸ್​ ಠಾಣಾ ಸರಹದ್ದಿನ ರೌಡಿ ಶೀಟರ್​ ಚರಣ್​ರಾಜ್​ (29) ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ, ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಕುಮ್ದೇಲ್​ ನಿವಾಸಿಯಾದ ಚರಣ್​ ರಾಜ್​ ಸರಣಿ ಅಪರಾಧ ಕೃತ್ಯಗಳಿಗೆ ಬ್ರೇಕ್​ ಹಾಕಲು ಉಡುಪಿ ಜಿಲ್ಲಾ ಪೊಲೀಸ್​ ಅಧೀಕ್ಷಕರು ನೀಡಿದ ವರದಿಯನ್ನಾಧರಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಬುಧವಾರ ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಆದೇಶ ಹೊರಡಿಸಿದ್ದಾರೆ.
10ಕ್ಕೂ ಹೆಚ್ಚು ಗಂಭೀರ ಪ್ರಕರಣ
ಬಂಧಿತ ಆರೋಪಿ ಚರಣ್​ ರಾಜ್​ ವಿರುದ್ಧ ಅವಳಿ ಜಿಲ್ಲೆಗಳ ವಿವಿಧ ಪೊಲೀಸ್​ ಠಾಣೆಗಳಲ್ಲಿ ಹತ್ತಾರು ಗಂಭೀರ ಪ್ರಕರಣಗಳು ದಾಖಲಾಗಿವೆ. ಬಂಟ್ವಾಳ ಗ್ರಾಮಾಂತರ, ಸುರತ್ಕಲ್​, ಮಂಗಳೂರು ಪೂರ್ವ ಹಾಗೂ ಉಡುಪಿ ನಗರ ಪೊಲೀಸ್​ ಠಾಣೆಗಳಲ್ಲಿ ಈತನ ವಿರುದ್ಧ ಕೊಲೆಯತ್ನ, ಮಾರಣಾಂತಿಕ ಹಲ್ಲೆ, ಅಕ್ರಮ ಕೂಟ ರಚನೆ, ಮಹಿಳೆಯರ ಮೇಲೆ ದೌರ್ಜನ್ಯ, ಮಾದಕ ದ್ರವ್ಯ (ಡ್ರಗ್ಸ್​) ಸೇವನೆ ಹಾಗೂ ಸಾಗಾಟ, ಎಸ್​.ಸಿ., ಎಸ್​.ಟಿ ಕೌರ್ಯ ತಡೆ ಕಾಯ್ದೆಯಡಿ ಒಟ್ಟು 10 ಪ್ರಕರಣಗಳು ದಾಖಲಾಗಿವೆ.

3 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು, 2 ಪ್ರಕರಣ ನ್ಯಾಯಾಲಯದಿಂದ ಖುಲಾಸೆಯಾಗಿದೆ. 4 ಪ್ರಕರಣ
ನ್ಯಾಯಾಂಗ ವಿಚಾರಣೆಯಲ್ಲಿದೆ. 1 ಪ್ರಕರಣ ತನಿಖಾ ಹಂತದಲ್ಲಿದೆ.