crime 
ಉಡುಪಿ

ಬಸ್‌ನಲ್ಲಿ ಪ್ರಯಾಣಿಕನ ಅಸಭ್ಯ ವರ್ತನೆ

ಬಂಟ್ವಾಳ: ಬಿ.ಸಿ.ರೋಡ್‌ನಿಂದ ಮೆಲ್ಕಾರ್ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಪ್ರಯಾಣಿಕೊಬ್ಬ ಸಾರ್ವಜನಿಕವಾಗಿ ಖಾಸಗಿ ಅಂಗಾಂಗವನ್ನು ಪ್ರದರ್ಶಿಸಿ ಅಶ್ಲೀಲವಾಗಿ ವರ್ತಿಸಿದ್ದಾನೆಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಟೇಟ್‌ಬ್ಯಾಂಕ್‌ನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ಸುವಾರು 60 ರಿಂದ 70 ವರ್ಷದೊಳಗಿನ ವ್ಯಕ್ತಿಯೊಬ್ಬರು ಬಿ.ಸಿ. ರೋಡ್‌ನಲ್ಲಿ ಬಸ್ ಹತ್ತಿ ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತಿದ್ದರು. ಈ ವೇಳೆ ಮಹಿಳಾ ಪ್ರಯಾಣಿಕರೊಬ್ಬರು ಚಾಲಕನ ಬಳಿಗೆ ಬಂದಾಗ ವ್ಯಕ್ತಿಯ ಖಾಸಗಿ ಅಂಗಾಂಗವನ್ನು ಪ್ರದರ್ಶಿಸಿದ್ದಾನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.