ಮಂಗಳೂರಿನಲ್ಲಿ ನಡೆದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ವಾರ್ಷಿಕ ಮಹಾಸಭೆಯಲ್ಲಿ ಡಾ.ಎಂ.ಎನ್. ರಾಜೇಂದ್ರಕುಮಾರ್ ಅವರು ಯಶ್ಪಾಲ್ ಸುವರ್ಣ ಅವರಿಗೆ 'ಸಾಧನಾ' ಪ್ರಶಸ್ತಿ ಪ್ರದಾನ ಮಾಡಿದರು. ಜಯಕರ್ ಶೆಟ್ಟಿ ಇಂದ್ರಾಳಿ, ದೇವಿಪ್ರಸಾದ್ ಶೆಟ್ಟಿ ಹಾಗೂ ಸಹಕಾರಿ ಮುಖಂಡರು ಇದ್ದರು.
* ಸತತ 10ನೇ ಬಾರಿಗೆ ಗೌರವದ ಹೆಗ್ಗಳಿಕೆ
* ಪುರಸ್ಕಾರ ಸ್ವೀಕರಿಸಿದ ಯಶ್ಪಾಲ್ ಸುವರ್ಣ
ಉಡುಪಿ: ಕರಾವಳಿಯ ಪ್ರತಿಷ್ಠಿತ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ಉಡುಪಿಯ 2025&-26ನೇ ಸಾಲಿನ ಸರ್ವತೋಮುಖ ಸಾಧನೆಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ 'ಸಾಧನಾ ಪ್ರಶಸ್ತಿ' ನೀಡಿ ಗೌರವಿಸಲಾಗಿದೆ. ಸತತ 10ನೇ ಬಾರಿಗೆ ಈ ಪುರಸ್ಕಾರ ಲಭಿಸಿದ ಕೀರ್ತಿಗೂ ಸಹ ಬ್ಯಾಂಕ್ ಭಾಜನವಾಗಿದೆ.
ಮಂಗಳೂರಿನಲ್ಲಿ ಶನಿವಾರ (ಆ.22) ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ವಾರ್ಷಿಕ ಮಹಾಸಭೆಯಲ್ಲಿ ಡಾ.ಎಂ.ಎನ್. ರಾಜೇಂದ್ರಕುಮಾರ್ ಅವರಿಂದ ಬ್ಯಾಂಕ್ನ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಪ್ರಶಸ್ತಿ ಸ್ವೀಕರಿಸಿದರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ 8 ಶಾಖೆಗಳ ಮೂಲಕ ಪ್ರಸಕ್ತ ಸಾಲಿನಲ್ಲಿ 1,200 ಕೋಟಿ ರೂಪಾಯಿಗೂ ಅಧಿಕ ವ್ಯವಹಾರ ನಡೆಸಿದೆ. ತನ್ಮೂಲಕ ಕರಾವಳಿ ಭಾಗದಲ್ಲಿಯೇ ಅತಿ ಹೆಚ್ಚು ಡಿವಿಡೆಂಡ್ ನೀಡುವ ಅಗ್ರಗಣ್ಯ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ಆಧುನಿಕ ವ್ಯವಸ್ಥೆಯೊಂದಿಗೆ ಸುಸಜ್ಜಿತ ಶಾಖೆಗಳನ್ನೂ ಹೊಂದಿದೆ. ಗ್ರಾಹಕ ಸ್ನೇಹಿಯಾಗಿ ವ್ಯವಹಾರ ನಡೆಸುತ್ತ ಸರ್ವಾಂಗೀಣ ಪ್ರಗತಿ ಸಾಧಿಸಿದೆ. ಬ್ಯಾಂಕ್ನ ಉತ್ತಮ ಕಾರ್ಯವೈಖರಿಗೆ ಈ ಬಾರಿಯೂ ಸಹ ಪ್ರತಿಷ್ಠಿತ 'ಸಾಧನಾ' ಪ್ರಶಸ್ತಿ ಲಭಿಸಿದೆ. ಈ ಪುರಸ್ಕಾರ ಲಭಿಸಲು ಬ್ಯಾಂಕ್ನ ಆಡಳಿತ ಮಂಡಳಿ, ನೌಕರರು, ಸಿಬ್ಬಂದಿ ಶ್ರಮ ಹಾಗೂ ಗ್ರಾಹಕರ ಪ್ರೋತ್ಸಾಹವೇ ಕಾರಣವಾಗಿದೆ.
— ಯಶ್ಪಾಲ್ ಸುವರ್ಣ. ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ನ ಅಧ್ಯಕ್ಷ.