ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ನೂತನ ಶಾಲಾ ಸಂಸತ್ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ರವೀಂದ್ರ ಪುತ್ತೂರು ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆ ಅಧ್ಯಕ್ಷ ಯುವರಾಜ ಜೈನ್, ಸಂಸ್ಥೆ ಕಾರ್ಯದರ್ಶಿ ರಶ್ಮಿತಾ ಜೈನ್, ಸಂಸ್ಥೆ ಆಡಳಿತ ನಿರ್ದೇಶಕ ಡಾ.ಬಿ.ಪಿ ಸಂಪತ್ ಕುಮಾರ್ ಮೊದಲಾದವರಿದ್ದರು.
ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಜವಾಬ್ದಾರಿಯ ಪ್ರಜ್ಞೆ, ಪ್ರಜಾಪ್ರಭುತ್ವದ ಮೌಲ್ಯ ಬೆಳೆಸುವಲ್ಲಿ ಶಾಲಾ ಸಂಸತ್ತು ಮಹತ್ವದ ಪಾತ್ರ ವಹಿಸುತ್ತದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ನಿರ್ದೇಶಕ ರವೀಂದ್ರ ಪುತ್ತೂರು ಹೇಳಿದರು.
ಕಲ್ಲಬೆಟ್ಟುವಿನ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಶಾಲಾ ಸಂಸತ್ತಿನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಸಂಸ್ಥೆ ಅಧ್ಯಕ್ಷ ಯುವರಾಜ ಜೈನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ರಶ್ಮಿತಾ ಜೈನ್, ಆಡಳಿತ ನಿರ್ದೇಶಕ ಡಾ.ಬಿ.ಪಿ ಸಂಪತ್ ಕುಮಾರ್, ಸಿಬಿಎಸ್‌ಇ ಶಾಲೆ ಪ್ರಾಂಶುಪಾಲ ಶ್ರೀಪ್ರಸಾದ್, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್, ಉಪ ಮುಖ್ಯ ಶಿಕ್ಷಕ ಜಯಶೀಲ ಬೆಳ್ತಂಗಡಿ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ಸಂಸತ್ತಿನ ನಾಯಕನಾಗಿ ಋಷಿಕೇಶ್ ಎ.ಮಿನಾಚೆ, ಉಪನಾಯಕನಾಗಿ ನಿಶಾಂತ್ ರಾಜ್, ಸ್ಪೀಕರ್ ಆಗಿ ನಿಹಾರಿಕಾ, ಶಿಕ್ಷಣ ಮತ್ತು ಸಾಂಸ್ಕೃತಿಕ ಮಂತ್ರಿಯಾಗಿ ಸಯ್ಯದಾ ಆನಂ, ಶಿಸ್ತು ಮಂತ್ರಿಯಾಗಿ ದೃಷ್ಟಿ, ಕ್ರೀಡಾ ಮಂತ್ರಿಯಾಗಿ ಚೇತನ್, ಜಲಶಕ್ತಿ ಮಂತ್ರಿಯಾಗಿ ಸಾನ್ವಿಕಾ, ವಿಪಕ್ಷದ ನಾಯಕಿಯಾಗಿ ತನ್ವಿ ಪೂಜಾರಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ರಶ್ಮಿ ಅತಿಥಿಗಳನ್ನು ಪರಿಚಯಿಸಿದರು. ಸ್ವರ್ಣಲತಾ ಪದಗ್ರಹಣ ಕಾರ್ಯಕ್ರಮ ನಡೆಸಿಕೊಟ್ಟರು. ವನಿತಾ ಪ್ರತಿಜ್ಞಾವಿಧಿ ಬೋಧಿಸಿದರು. ಋಷಿಕೇಶ್, ದೃಷ್ಠಿ, ತನ್ವಿ ಪೂಜಾರಿ ತಮ್ಮ ಜವಾಬ್ದಾರಿಗಳನ್ನು ವಾಚಿಸಿದರು. ಶಿವಪ್ರಸಾದ್ ಭಟ್ ಸ್ವಾಗತಿಸಿದರು. ಜಯಲಕ್ಷ್ಮೀ ನಿರೂಪಿಸಿದರು.
ಶಾಲಾ ಸಂಸತ್ ಸದಸ್ಯರು ವಿದ್ಯಾರ್ಥಿಗಳ ಧ್ವನಿಯಾಗಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿರುವ ಸಾಮರ್ಥ್ಯವನ್ನು ಸಾಧನೆಗೆ ಪೂರಕವಾಗಿ ಬಳಸಿಕೊಂಡು ಶಿಸ್ತು, ಸಮಯ ಪಾಲನೆ, ಸೇವಾ ಮನೋಭಾವದೊಂದಿಗೆ ಶಾಲೆ ಅಭಿವೃದ್ಧಿಗೆ ಕೈಜೋಡಿಸಬೇಕು.
— ಯುವರಾಜ ಜೈನ್ ಸಂಸ್ಥೆ ಅಧ್ಯಕ್ಷ
ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಶಿಕ್ಷಣದೊಂದಿಗೆ ಸಂಸ್ಕಾರ, ನೈತಿಕ ಮೌಲ್ಯ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು, ನಾಯಕತ್ವ ಬೆಳೆಸುವ ಕಾರ್ಯಕ್ರಮಗಳ ಮೂಲಕ ರಾಜ್ಯದಲ್ಲಿ ಮಾದರಿ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿದೆ.
— ರವೀಂದ್ರ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ನಿರ್ದೇಶಕ