ಉಡುಪಿ

ಲಾರಿ ಡಿಕ್ಕಿಯಾಗಿ ಸ್ಕೂಟರ್ ಸವಾರರು ಗಂಭೀರ

ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

ಕುಂದಾಪುರ: ರಾಜ್ಯ ಹೆದ್ದಾರಿ 52ರ ಬಳ್ಕೂರು ಗ್ರಾಮದ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಶುಕ್ರವಾರ ಪರವಾನಗಿ ಇಲ್ಲದೆ ಮಣ್ಣು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕುಂದಾಪುರ ಕಡೆಯಿಂದ ಬಳ್ಕೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್ ಎದುರಿನಿಂದ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನೋಡಿ ನಿಧಾನ ಚಲಿಸಿದಾಗ ಹಿಂದಿನಿಂದ ಬರುತ್ತಿದ್ದ ಇನ್ನೊಂದು ಟಿಪ್ಪರ್ ಡಿಕ್ಕಿಯಾಗಿ ಕಂಡ್ಲೂರು ಕಡೆಯಿಂದ ಬಸ್ರೂರು ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ಕೂಟರ್ ಸವಾರರಾದ ಟಿ.ಕೆ.ಮೊಹಮ್ಮದ್ ಶಯಾನ್ ಹಾಗೂ ಮೊಹಮ್ಮದ್ ರಯಾನ್ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೆ ಕಾರಣವಾದ ಟಿಪ್ಪರ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ಕೊಜೆ ಮಣ್ಣು ತುಂಬಿಕೊಂಡು ಸಾಗಾಟ ವಾಡುತ್ತಿರುವುದು ಬೆಳಕಿಗೆ ಬಂದಿದ್ದು, ಟಿಪ್ಪರ್ ಚಾಲಕರಾದ ನಾಗರಾಜ, ರತ್ವೀಜ್ ಹಾಗೂ ಕೊಜೆ ಮಣ್ಣಿನ ತೆಗೆದ ಜಾಗದ ವಾಲೀಕ ಅಜಿತ್ ಶೆಟ್ಟಿ ಅವರನ್ನು ಬಂಧಿಸಲಾಗಿದೆ. ಕುಂದಾಪುರ ಗ್ರಾವಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.