ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಉಡುಪಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಶೇ. 90 ಕ್ಕಿಂತ ಹೆಚ್ಚು ಅಂಕಗಳಿಸಿದ ರಾಜ್ಯದ 1200 ಸ್ಕೌಟ್ಸ್, ಗೈಡ್ಸ್, ರೋವರ್ಸ್ ಮತ್ತು ರೇಂರ್ಜಸ್ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮ ಜೂ. 26 ರಂದು ಬೆಳಿಗ್ಗೆ 10.30 ಕ್ಕೆ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪರ್ಯಾಯ ಶ್ರೀ ಶಿರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಮಾಜಿ ಸಚಿವ ಹಾಗೂ ರಾಜ್ಯ ಮುಖ್ಯ ಆಯುಕ್ತ ಡಾ. ಪಿ. ಜಿ. ಆರ್. ಸಿಂಧ್ಯ ಉದ್ಘಾಟಿಸಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು. ಟಿ. ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ , ಯಶ್ಪಾಲ್ ಸುವರ್ಣ, ಸುನಿಲ್ ಕುಮಾರ್, ಗುರುರಾಜ್ ಗಂಟಿಹೊಳೆ , ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತ ಡಾ. ಮೋಹನ್ ಆಳ್ವ, ವೊದಲಾದವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕಬ್, ಬುಲ್ ಬುಲ್ ಮಕ್ಕಳ 'ಗೋಲ್ಡನ್ ಆರೋ' ಪ್ರಶಸ್ತಿ ಹಾಗೂ 'ರಾಷ್ಟ್ರಪತಿ ಪ್ರಮಾಣ ಪತ್ರ' ವಿತರಿಸಲಾಗುವುದು ಎಂದರು.
ಜಿಲ್ಲಾ ಗೈಡ್ ಆಯುಕ್ತೆ ಜ್ಯೋತಿ ಜೆ. ಪೈ, ಜಿಲ್ಲಾ ಕಾರ್ಯದರ್ಶಿ ಆನಂದ ಬಿ. ಅಡಿಗ, ಜಿಲ್ಲಾ ಖಜಾಂಚಿ ಹರಿಪ್ರಸಾದ್ ರೈ ಹಾಗೂ ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್ ಉಪಸ್ಥಿತರಿದ್ದರು.
ℹ️ ಜೂನ್ 27 ರಿಂದ ರಾಜ್ಯ ಮಟ್ಟದ ಏಕತಾ' ಶಿಬಿರಉಡುಪಿ ಜಿಲ್ಲೆಯು ನಿರಂತರವಾಗಿ 125 ಕ್ಕೂ ಹೆಚ್ಚು ಕಾರ್ಯಕ್ರಮ ಹಾಗೂ ಶಿಬಿರಗಳನ್ನು ನಡೆಸುವ ಮೂಲಕ ರಾಜ್ಯದಲ್ಲೇ ಅಗ್ರ ಸ್ಥಾನದಲ್ಲಿದೆ. ಜೂನ್ 27 ರಿಂದ 29 ರವರೆಗೆ ಅತ್ರಾಡಿ ವಂಡ್ಸೆ ವಂದೇ ಮಕ್ಕಳ ಕೂಟದಲ್ಲಿ ರಾಜ್ಯ ಮಟ್ಟದ ವಿಶೇಷ ಶಿಬಿರ 'ಏಕತಾ' ಸಾಮಾಜಿಕ ಸಾಮರಸ್ಯ ಶಿಬಿರ ಹಾಗೂ ಕಬ್, ಬುಲ್ ಬುಲ್ ಉತ್ಸವ ನಡೆಯಲಿದೆ.