ಹರಿಹರ ಪಲ್ಲತ್ತಡ್ಕದಲ್ಲಿ ಒಕ್ಕೂಟಗಳ ಪದಗ್ರಹಣ ಸಮಾರಂಭವನ್ನು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಉದ್ಘಾಟಿಸಿದರು. ಪ್ರಮುಖರಾದ ವೆಂಕಟ್ ವಳಲಂಬೆ, ಮಾಧವ ಗೌಡ, ತೀರ್ಥರಾಮ ಮೊದಲಾದರು ಉಪಸ್ಥಿತರಿದ್ದರು.  
ಉಡುಪಿ

ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಾವಲಂಬಿ ಜೀವನ

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಸೇರಿಕೊಂಡು ಹಲವಾರು ಕುಟುಂಬಗಳು ಉನ್ನತಿ ಸಾಧಿಸಿದೆ. ಬದುಕಿನಲ್ಲಿ ಅಭಿವೃದ್ಧಿ ಹೊಂದಿ ಸ್ವಾವಲಂಬಿ ಜೀವನ ನಡೆಸಲು ಗ್ರಾಮಾಭಿವೃದ್ಧಿ ಯೋಜನೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಎಂ.ವೆಂಕಪ್ಪ ಗೌಡ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಸಂಯುಕ್ತ ಆಶ್ರಯದಲ್ಲಿ ಹರಿಹರ ಪಲ್ಲತ್ತಡ್ಕದಲ್ಲಿ ಶನಿವಾರ ಹರಿಹರ ಪಲ್ಲತ್ತಡ್ಕ, ಐನೆಕಿದು, ಬಾಳುಗೋಡು ಮತ್ತು ಕೊತ್ನಡ್ಕ ಪ್ರಗತಿ ಬಂಧು ಸ್ವಸಹಾಯ ಸಂಘ ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಶ್ರೀ ಹರಿಹರೇಶ್ವರ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗದೀಶ್ ಪಡ್ಪು ಅಧ್ಯಕ್ಷತೆ ವಹಿಸಿದ್ದರು. ಗುತ್ತಿಗಾರಿನ ಶ್ರೀ ಮುತ್ತಪ್ಪ ತಿರುವಪ್ಪ ದೈವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಸುಳ್ಯ ತಾಲೂಕು ಯೋಜನಾಧಿಕಾರಿ ಮಾಧವ ಗೌಡ, ಜನ ಜಾಗೃತಿ ವೇದಿಕೆ ವಲಯಾಧ್ಯಕ್ಷ ಸತೀಶ್ ಟಿ.ಎನ್., ಬಾಳುಗೋಡು ಒಕ್ಕೂಟ ಸ್ಥಾಪಕಾಧ್ಯಕ್ಷೆ ಉಷಾ ಕಿರಿಭಾಗ, ಒಕ್ಕೂಟಗಳ ವಲಯಾಧ್ಯಕ್ಷ ತೀರ್ಥರಾಮ, ಭಜನಾ ಪರಿಷತ್ ವಲಯಾಧ್ಯಕ್ಷ ಚಂದ್ರಶೇಖರ, ವಲಯ ಮೇಲ್ವಿಚಾರಕ ಬಾಲಕೃಷ್ಣ ಗೌಡ ಕೆ., ಸೇವಾಪ್ರತಿನಿಧಿಗಳಾದ ನಾಗವೇಣಿ, ರೇಖಾ ಇದ್ದರು.
ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರನ್ನು, ನವಜೀವನ ಸಮಿತಿ ಸದಸ್ಯರನ್ನು, ಭಜನಾ ಪರಿಷತ್‌ನ ಪದಾಧಿಕಾರಿಗಳು, ಒಕ್ಕೂಟಗಳ ನಿಕಟಪೂರ್ವ ಪದಾಧಿಕಾರಿ ಹಾಗೂ ದಾಖಲಾತಿ ಸಮಿತಿ ಸದಸ್ಯರನ್ನು ಗೌರವಿಸಲಾಯಿತು.
ಒಲಂಪಿಯಾಡ್ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಸ್ತಾಂತರಿಸಲಾಯಿತು. ಗಿರೀಶ್ ಎಂ.ಟಿ. ಸ್ವಾಗತಿಸಿದರು. ನಿತಿನ್ ಕುಮಾರ್ ನಿರೂಪಿಸಿದರು. ಪುಷ್ಪಾವತಿ ವಂದಿಸಿದರು.